ಬ್ರೇಕಿಂಗ್ ನ್ಯೂಸ್
19-08-20 11:40 am Headline Karnataka News Network ಕ್ರೈಂ
ನವದೆಹಲಿ, ಆಗಸ್ಟ್ 19: ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶ ನೀಡಿದ್ದಾರೆ.
ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟನ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಪಾಟ್ನಾದಲ್ಲಿ ನಟ ಸುಶಾಂತ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ 306 (ಆತ್ಮಹತ್ಯೆಗೆ ಪ್ರಚೋದನೆ), 341 (ತಪ್ಪಾದ ಸಂಯಮಕ್ಕಾಗಿ ಶಿಕ್ಷೆ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ), 380 (ವಾಸಿಸುವ ಮನೆಯಲ್ಲೇ ಕಳ್ಳತನ), 406 (ವಿಶ್ವಾಸಾರ್ಹ ಉಲ್ಲಂಘನೆ) ಮತ್ತು 420 (ಮೋಸ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm