ಬ್ರೇಕಿಂಗ್ ನ್ಯೂಸ್
05-03-21 11:40 am Headline Karnataka News Network ಕ್ರೈಂ
ಬೆಂಗಳೂರು, ಮಾರ್ಚ್ 05: ವಿದ್ಯಾರ್ಥಿ ವೀಸಾ ಹೆಸರಿನಲ್ಲಿ ಬೆಂಗಳೂರಿಗೆ ಬಂದು ಪ್ರತಿಷ್ಠಿತರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯುಗೋಚಿಕೂ ವಿಕ್ಟರ್ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಎಂಡಿಎಂಎ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವೀಸಾ ಮೇಲೆ ಬಂದಿದ್ದ ವಿಕ್ಟರ್, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಮುಂಬಯಿನಲ್ಲಿರುವ ಪರಿಚಿತ ಮೈಕೇಲ್ ಎಂಬಾತನಿಂದ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಇಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಬೆಳೆಸಿ ಅವರಿಗೆ ದುಬಾರಿ ಬೆಲೆಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದಲೂ ಇವನು ಡ್ರಗ್ ಡೀಲಿಂಗ್ ನಲ್ಲಿ ಶಾಮೀಲಾಗಿದ್ದ.
ಈತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಈ ಜಾಲದಲ್ಲಿ ಸಿಲುಕಿರುವ ಇತರೆ ಪೆಡ್ಲರ್‌ಗಳಿಗಾಗಿ ಶೋಧ ನಡೆದಿದೆ. ಸಿಸಿಬಿ ಪೊಲೀಸ್ ಇನ್‌ಸ್ಪೆಕ್ಟರ್ ಲಕ್ಷ್ಮೀ ಕಾಂತಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ವಿಕ್ಟರ್ ವಿಚಾರಣೆ ವೇಳೆ ಕೆಲವು ಪ್ರತಿಷ್ಠಿತ ವ್ಯಕ್ತಿಗಳು ಡ್ರಗ್ ಖರೀದಿ ಮಾಡಿರುವ ಮಾಹಿತಿ ಸಿಕ್ಕಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ವಿಕ್ಟರ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
Bangalore CCB police have arrested an African peddler involved in drug peddling and seized 500 kg of ganja worth Rs 40 lakh.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm