ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm