ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm