ಬ್ರೇಕಿಂಗ್ ನ್ಯೂಸ್
08-03-21 11:42 am Headline Karnataka News Network ಕ್ರೈಂ
ಬೆಳಗಾವಿ, ಮಾ 8: ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ ಬರೋಬ್ಬರಿ 6.675 ಟನ್ ಜಿಲೆಟಿನ್ ಕಡ್ಡಿ, ಡಿಟೋನೇಟರ್ಗಳನ್ನು ಜಿಲ್ಲೆಯ ಹೊನಗಾ ಗ್ರಾಮದ ಬಳಿ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.
ಎರಡು ವಾಹನಗಳಲ್ಲಿ ಸ್ಫೋಟಕ ಸಾಗಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಬೊಬಲವಾಡದ ರಮೇಶ್ ಲಕ್ಕೋಟಿ, ರಾಜು ಶಿರಗಾವಿ, ಮುಗಳಿ ನಿವಾಸಿ ಅರುಣಮಠದ, ವಿನಯ್ ಅವರುಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರೋಶಿ ಗ್ರಾಮದಿಂದ ಧಾರವಾಡ, ಗದಗ ಕಡೆ ಸ್ಫೋಟಕಗಳನ್ನು ಈ ನಾಲ್ವರು ಸಾಗಿಸುತ್ತಿದ್ದು, ಸ್ಫೋಟಕಗಳ ಮೌಲ್ಯ ನಾಲ್ಕು ಲಕ್ಷ ಎಂದು ಅಂದಾಜಿಸಲಾಗಿದೆ.
ಟಾಟಾ ಕ್ಯಾಂಟರ್, ಬೊಲೆರೊ ಪಿಕ್‌ಅಪ್ ವಾಹನಗಳಲ್ಲಿ ಇಷ್ಟು ಪ್ರಮಾಣದ ಸ್ಫೋಟಕಗಳನ್ನು ಬಂಧಿತರು ಸಾಗಿಸುತ್ತಿದ್ದರು. ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ಸ್ಫೋಟಕ ಸಾಗಿಸುತ್ತಿರುವ ಮಾಹಿತಿಯ ಆಧಾರದ ಮೇಲೆ ಕಾಕತಿ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿತ್ತು. ಹಾಗೂ ಟಾಟಾ ಏಸ್ ವಾಹನ ಚಾಲಕ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯ ಸಚಿವ ಸುಧಾಕರ್ ತವರು ಕ್ಷೇತ್ರದಲ್ಲಿ ಇಂತಹದೊಂದು ದುರಂತ ಸಂಭವಿಸಿತ್ತು. ಹಾಗೂ ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿತ್ತು.
ಚಿಕ್ಕಬಳ್ಳಾಪುರ ಘಟನೆಗೂ ಮುನ್ನ ಶಿವಮೊಗ್ಗದ ಹುಣಸೋಡು ಬಳಿಯಿರುವ ರೈಲ್ವೆ ಕ್ವಾರಿಯತ್ತ ತೆರಳುತ್ತಿತ್ತು. ಇನ್ನೇನು ಕ್ವಾರಿ ರೀಚ್ ಆಗ್ಬೇಕಿತ್ತು..ಆದರೆ ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ರೆ, ಲಾರಿಯಲ್ಲಿದ್ದ ಬಿಹಾರ ಮೂಲದ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹವೂ ಒಂದೊಂದು ದಿಕ್ಕಿನಲ್ಲಿ ಛಿದ್ರ ಛಿದ್ರವಾಗಿ ಬಿದ್ದಿದ್ದವು. ಸ್ಫೋಟದ ತೀವ್ರತೆ ಹೇಗಿತ್ತು ಅಂದ್ರೆ, ದುರಂತದಲ್ಲಿ ಮೃತಪಟ್ಟಿರೋ ಅದೆಷ್ಟೋ ಕಾರ್ಮಿಕರ ಮೃತದೇಹ ಗುರುತೇ ಸಿಗದಷ್ಟು ಛಿದ್ರ ಛಿದ್ರವಾಗಿದ್ದವು.
ಹೀಗೆ ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರ್ಘಟನೆಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ದೊರೆತ ಜಿಲೆಟಿನ್ ಕಡ್ಡಿಗಳು ಆತಂಕ ಮೂಡಿಸಿವೆ.
Belagavi police have arrested four persons for transporting 6 tons of large gelatin explosives illegally.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am