ಬ್ರೇಕಿಂಗ್ ನ್ಯೂಸ್
13-03-21 11:24 am Udupi Correspondent ಕ್ರೈಂ
ಉಡುಪಿ, ಮಾ.13: ಕಸ ಹೆಕ್ಕಲು ಬಂದಿದ್ದ ಪೌರ ಕಾರ್ಮಿಕರ ಮೇಲೆ ಇಲೆಕ್ಟ್ರಾನಿಕ್ ಶಾಪ್ ಮಾಲೀಕ ಮತ್ತು ಸಿಬಂದಿ ಸೇರಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ.


ಒಣ ಕಸ, ಹಸಿ ಕಸದ ಬಗ್ಗೆ ಕೇಳಿದ ಪೌರ ಕಾರ್ಮಿಕರ ಪ್ರಶ್ನೆಗೆ, ಇಲೆಕ್ಟ್ರಾನಿಕ್ ಶಾಪ್ ಓನರ್ ಎಗರಾಡಿದ್ದಾನೆ. ಕಸ ಎತ್ತುವ ವಾಹನದ ಚಾಲಕ ಸಂಜು ಮಾದಾರ ಮತ್ತು ಇನ್ನೊಬ್ವ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಅದು ವೈರಲ್ ಆಗುತ್ತಿದ್ದಂತೆ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿದೆ.
ವಿಷಯ ತಿಳಿದು ನಗರಸಭೆ ಆರೋಗ್ಯಧಿಕಾರಿ ಕರುಣಾಕರ್ ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿ ಪ್ರಶ್ನೆ ಮಾಡುತ್ತಿದ್ದಾಗಲೇ ಪೌರ ಕಾರ್ಮಿಕರ ಮೇಲೆ ಮತ್ತೆ ಅಂಗಡಿ ಮಾಲೀಕ ಹಲ್ಲೆಗೆ ಮುಂದಾಗಿದ್ದಾನೆ.


ವಿಡಿಯೋ ಮತ್ತು ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಘಟನೆ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ. ಟ್ವಿಟರ್ ನಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಎಸ್ಪಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಆರೋಪಿಗಳನ್ನು ಬಚಾವ್ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಇದರ ಜೊತೆಗೆ ನಮ್ಮ ನಗರವನ್ನು ಕ್ಲೀನ್ ಮಾಡುವ ಪೌರ ಕಾರ್ಮಕರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಘಟನೆ ಸಂಬಂಧಿಸಿ ಉಡುಪಿ ಪೊಲೀಸರು ನೇಜಾರು ನಿವಾಸಿ ಇಸ್ಮಾಯಿಲ್ (55) ಮತ್ತು ಹೂಡೆಯ ಸುಹೈಲ್ (28) ಎಂಬವರನ್ನು ಬಂಧಿಸಿದ್ದಾರೆ.
Video:
An owner of a reputed electronic shop and his staff in Udupi reportedly attacked a civic worker over a Garbage issue near Udupi City Bus Stand.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm