ಬ್ರೇಕಿಂಗ್ ನ್ಯೂಸ್
01-04-21 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.1: ದನ ಕಳ್ಳರೆಂದು ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಂ ಎಂಬಾತ ತನ್ನ ಪಿಕಪ್ ವಾಹನದಲ್ಲಿ ಮಹಮ್ಮದ್ ಮುಸ್ತಾಫ ಎಂಬಾತನ ಜೊತೆ ಸವಣಾಲಿಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿ ರಾತ್ರಿ ಊಟ ಮುಗಿಸಿ 10.30ರ ವೇಳೆಗೆ ಮರಳುತ್ತಿದ್ದಾಗ ಸವಣಾಲು ಸಮೀಪದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಪಿಕಪ್ ವಾಹನವನ್ನು ಅಡ್ಡಹಾಕಿದ್ದಾರೆ. ಇದೇ ವೇಳೆ, ಓಮ್ನಿ ಕಾರಿನಲ್ಲಿ ಮತ್ತೆ ಕೆಲವು ಯುವಕರು ಆಗಮಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನೀವು ದನ ಕಳ್ಳರು. ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾ ದೊಣ್ಣೆ ಮತ್ತು ಚಪ್ಪಲಿಯಿಂದ ಹೊಡೆದಿದ್ದಾರೆ. ಪಿಕಪ್ ವಾಹನದ ಮೇಲೂ ಹಾನಿ ಮಾಡಿದ್ದಾರೆ.

ಏಟಿನಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಬಳಿಕ ರಾತ್ರಿ ಒಬ್ಬರು ಗಮನಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆಗೊಳಗಾದ ಅಬ್ದುಲ್ ರಹೀಂ ಹಲ್ಲೆಗೈದ ತಂಡದ ಕೆಲವರನ್ನು ಗುರುತಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂಬವರನ್ನು ಬಂಧಿಸಿದ್ದಾರೆ.
Mangalore Gang accuses two persons on Pick up Van of cattle trafficking attacks them brutally in Belthanagady. The police have arrested five in connection to this case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm