ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ತಂದೆಯನ್ನು ಹತ್ಯೆ ಮಾಡಿ ಕೆಲಸಕ್ಕೆ ಸೇರಿದ್ದ ಮಗ ಪೊಲೀಸರ ವಶಕ್ಕೆ

27-08-20 11:26 am       Mangalore Reporter   ಕ್ರೈಂ

ವಾಕಿಂಗ್ ತೆರಳಿದ್ದ ತನ್ನ ತಂದೆಯನ್ನು ಕೊಲೆ ಮಾಡಿ ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದ ಆರೋಪಿ ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಆಗಸ್ಟ್ 27: ವಾಕಿಂಗ್ ತೆರಳಿದ್ದ ತನ್ನ ತಂದೆಯನ್ನು ಕೊಲೆ ಮಾಡಿ ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದ ಆರೋಪಿ ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 24 ರಂದು ಬೆಳ್ತಂಗಡಿಯ ಕುತ್ಯಾರು ರಸ್ತೆ ನಿವಾಸಿ  ಕಾರು ಚಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಗ ದಯಾನಂದನನ್ನು (32) ಪೊಲೀಸರು ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ಬಂಧಿಸಿದ್ದಾರೆ. ವಾಸು ಸಪಲ್ಯ  ಬೆಳಗ್ಗೆ ವಾಕಿಂಗ್ ತೆರಳಿದ್ದ ಸಂದರ್ಭ ಮಗ ದಯಾನಂದ ಮಾರಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದ ಎಂದು ಹೇಳಲಾಗಿತ್ತು. 

ಕೃತ್ಯದ ಬಳಿಕ ದಯಾನಂದ ನಾಪತ್ತೆತಂದೆಯನ್ನು ಹತ್ಯೆ ಮಾಡಿ ಕೆಲಸಕ್ಕೆ ಸೇರಿದ್ದ ಮಗ ಪೊಲೀಸರ ವಶಕ್ಕೆಯಾಗಿದ್ದ ಕಾರಣ, ಆತನೇ ಕೊಲೆ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿ ತನಿಖೆ ಆರಂಭಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.