ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ ; ಮೂವರ ಬಂಧನ

14-05-21 02:20 pm       Bangalore Correspondent   ಕ್ರೈಂ

ರೆಮ್‌ಡೆಸಿವಿರ್, ಆಕ್ಸಿಜನ್, ಬೆಡ್ ಜತೆಗೆ ಇದೀಗ ಆಕ್ಸಿಜನ್ ಸಿಲಿಂಡರ್‌ಗಳನ್ನು ಕೂಡ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

Photo credits : yahoo.com

ಬೆಂಗಳೂರು, ಮೇ. 14: ಕೊರೊನಾ ಎರಡನೇ ಅಲೆ ನಾನಾ ಕಾಳದಂಧೆಗಳಿಗೆ ಎಡೆ ಮಾಡಿಕೊಟ್ಟಿದೆ. ಆರೋಗ್ಯ ಇಲಾಖೆ ತೆಗೆದುಕೊಂಡ ಅಡ್ಡ ತೀರ್ಮಾನಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಹೆಜ್ಜೆ- ಹೆಜ್ಜೆಗೂ ಮೆಡಿಕಲ್ ಮಾಫಿಯಾಗಳು ಹುಟ್ಟಿಕೊಂಡು ಜನರನ್ನು ಸುಲಿಗೆ ಮಾಡುತ್ತಿವೆ. ರೆಮ್‌ಡೆಸಿವಿರ್, ಆಕ್ಸಿಜನ್, ಬೆಡ್ ಜತೆಗೆ ಇದೀಗ ಆಕ್ಸಿಜನ್ ಸಿಲಿಂಡರ್‌ಗಳನ್ನು ಕೂಡ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

ಆಕ್ಸಿಜನ್‌ನನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನನ್ನು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ರಾಜ್ ಕುಮಾರ್, ಅನೀಲ್ ಕುಮಾರ್ ಮತ್ತು ಮಂಜುನಾಥ್ ಬಂಧಿತರು. ಇವರು ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಕ್ಸಿಜನ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಈ ಹಿಂದೆ ಮಾರಾಟ ಮಾಡಿರುವ ಕುರಿತು ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಲಕ್ಷಾಂತರ ಮೌಲ್ಯದ ಆಕ್ಸಿಜನ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

Three trying to sell oxygen cylinders illegally were arrested by the CCB police in Bangalore.