ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್‍ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್‍ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm