ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm