ಬ್ರೇಕಿಂಗ್ ನ್ಯೂಸ್
14-06-21 05:35 pm Mangalore Correspondent ಕ್ರೈಂ
ಭಟ್ಕಳ, ಜೂನ್ 14; ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿಸಿ ಪರಿವರ್ತಿಸಿದ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ನವಾಯತ್ ಕಾಲನಿಯ ನಿಸಾರ್ ಮಹಮ್ಮದ್ ಮುಕ್ತೇಸರ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿಸಿ ದೂರಸಂಪರ್ಕ ಇಲಾಖೆಯನ್ನು ವಂಚಿಸುತ್ತಿತ್ತು.
ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬ ಇಬ್ಬರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ತಿಳಿದು ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್‌ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಸಿಮ್ ಕಾರ್ಡ್‌ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದರು.
Bhatkal One arrested for an international telephone exchange racket. Bengaluru CCB police have come to Bhatkal to arrest the accused who have been identified as Mohammed Mukthesara.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm