ಬ್ರೇಕಿಂಗ್ ನ್ಯೂಸ್
09-07-21 05:40 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಪಿಎಚ್ ಡಿ ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿಸಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಪಿಹೆಚ್‌ಡಿ ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರಿಂದ ಅವರ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.

ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Mangalore university Professor takes Bribes to earn students pass PhD court sentences, Anitha Ravishankar, to a five-year jail term.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm