ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm