ಬ್ರೇಕಿಂಗ್ ನ್ಯೂಸ್
10-07-21 11:11 am Headline Karnataka News Network ಕ್ರೈಂ
ಮೈಸೂರು, ಜುಲೈ 10: ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಇದೀಗ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅಮಾನುಷ ಕೃತ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ.
ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಮಾಹಿತಿ ನೀಡಿದ ವೃದ್ದೆಯ ಮೇಲೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿಗಳು ಬೆದರಿಕೆ ಹಾಕಿದ್ದಾರೆ. ಈ ಮೂಲಕ ಅತ್ಯಾಚಾರ ಪ್ರಕರಣವನ್ನೇ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

ಆದರೆ, ಕೊನೆಗೆ ಮಾನವ ಹಕ್ಕುಗಳ ಸೇವಾ ಸಮಿತಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಳಕಿಗೆ ತಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಆಸ್ಪತ್ರೆಗೆ ದೌಡಾಯಿಸಿದ ದೇವರಾಜ ಪೊಲೀಸ್ ಠಾಣೆ ಅಧಿಕಾರಿಗಳು ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆದರೆ, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.
ಪೊಲೀಸರು ಬಂದರೂ ಸಹ ವೈದ್ಯರು ಹಾಗೂ ನರ್ಸ್ಗಳು ಪರಿಶೀಲನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಆದರೆ, ಈ ಪೈಶಾಚಿಕ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
A mentally challenged woman has been allegedly raped in K R Hospital in Mysore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm