ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.

ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm