ಬ್ರೇಕಿಂಗ್ ನ್ಯೂಸ್
11-07-21 02:08 pm Bengaluru Correspondent ಕ್ರೈಂ
ಬೆಂಗಳೂರು, ಜು. 11: ದಾದಾಗಿರಿ ಮಾಡಿಕೊಂಡು ಜನ ಸಾಮಾನ್ಯರ ನೆಮ್ಮದಿಗೆ ಭಂಗ ತರುತ್ತಿದ್ದ ರೌಡಿಗಳಿಗೆ ಬೆಂಗಳೂರು ಪೊಲೀಸರು ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗದ ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ರೌಡಿ ಚಟುವಟಿಕೆಯಲ್ಲಿ ಸಕ್ರಿಯವಾಗಿರುವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗಿದೆ.
ಬೆಂಳೂರಿನಲ್ಲಿ ಬರೋಬ್ಬರಿ 2144 ರೌಡಿಗಳ ನಿವಾಸಗಳ ಮೇಲೆ ದಾಳಿ ನಡೆದಿದೆ. ಮಾತ್ರವಲ್ಲ ಈ ರೌಡಿ ಚಟುವಟಿಕೆಗೂ ಹಾಗೂ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೂ ಸಿಸಿಬಿ ಪೊಲೀಸರು ದಾಳಿ ನೆಡಸಿ ಪಾತಕ ಲೋಕದೊಂದಿಗೆ ಬಳೆದಿದ್ದ ಸಂಪರ್ಕ ಕಾಲವನ್ನು ಕಡಿತ ಮಾಡಿದ್ದಾರೆ. ಬಾಲ ಬಿಚ್ಚಿದರೆ ಪರಿಣಾಮ ನೆಟ್ಟಗಿರಲ್ಲ ಎಂಬ ಸಂದೇಶವನ್ನು ಬೆಂಗಳೂರು ಪೊಲೀಸರು ರವಾನಿಸಿದ್ದಾರೆ.





ರೌಡಿ ಸಾಮ್ರಾಜ್ಯಕ್ಕೆ ಎಚ್ಚರಿಕೆ :
ನಗರದಲ್ಲಿ ಅಪರಾಧ ಚಟುವಟಿಕೆ ನಿಗ್ರಹ ಮಾಡುವ ನಿಟ್ಟಿನಲ್ಲಿ ಎಲ್ಲಾ ವಿಭಾಗದಲ್ಲೂ ರೌಡಿ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. 2144 ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ಮಾಡಿ ಕೆಲವರಿಂದ ಮಹತ್ವದ ದಾಖಲೆ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವತ್ತೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೂ ದಾಳಿ ನಡೆದಿದೆ. ಜೈಲಿನಲ್ಲಿರುವ ಹಾಗೂ ಬೆಂಗಳೂರಿನಲ್ಲಿ ದಾಳಿಗೆ ಒಳಗಾದ ರೌಡಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ದಾಳಿಗೆ ಸಂಬಂಧಿಸಿದಂತೆ 31 ಮಂದಿಯ ಮೇಲೆ ಗೂಂಡಾ ಕಾಯ್ದೆ ಅಡಿ ಕೇಸು ದಾಖಲಿಸಲಾಗಿದೆ. ಮುಚ್ಚಳಿಕೆ ಉಲ್ಲಂಘನೆ ಮಾಡಿದ ರೌಡಿಗಳಿಂದ ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ. ಒಟ್ಟಾರೆ 490 ರೌಡಿ ಶೀಟರ್ ಗಳ ಮೇಲೆ ಕೇಸು ದಾಖಲಿಸಿದ್ದು, ಒಟ್ಟು 561 ಪ್ರಕರಣ ದಾಖಲಿಸಲಾಗಿದೆ. ಕೆಲವು ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜಧಾನಿಯ ಎಲ್ಲಾ ವಿಭಾಗದಲ್ಲೂ ರೌಡಿಗಳಿಗೆ ನಡುಕ
ಬೆಂಗಳೂರಿನ ಅತಿದೊಡ್ಡ ರೌಡಿ ಸಾಮ್ರಾಜ್ಯ ಹೊಂದಿರುವ ಉತ್ತರ ವಿಭಾಗದ 292 ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ಮಾಡಿ 230 ರೌಡಿ ಶೀಟರ್ ಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಲಾಗಿದೆ. ಅದರಲ್ಲೂ ಕ್ರಿಮಿನಲ್ ಹಿನ್ನೆಲೆಯುಳ್ಳವರ ವಿರುದ್ಧ ಕೇಸು ದಾಖಲಿಸಿ ಜೈಲಿಗೆ ರವಾನಿಸಲಾಗಿದೆ. ಅದೇ ರೀತಿ ದಕ್ಷಿಣ ವಿಭಾಗ ಸೇರಿದಂತೆ ಬೆಂಗಳೂರಿನ ಏಳು ಉಪ ವಿಭಾಗದಲ್ಲೂ ದಾಳಿ ನಡೆಸಲಾಗಿದೆ. ರೌಡಿ ಹಿನ್ನೆಲೆಯುಳ್ಳವರ ಅಪರಾಧ ಚಟುವಟಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ರೌಡಿಗಳ ಎಡೆ ಮುರಿಕಟ್ಟಲು ಸೂಚಿಸಿದ್ದರು.
Bengaluru cops raid over 2000 houses of Criminals 561 rowdy sheeters booked.At the same time, the city police also carried out massive search operations and raided residences of rowdies and habitual offenders. “We have recovered a huge number of lethal weapons and rounded up several habitual offenders. Enquiries are being conducted,” said a senior police officer.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm