ಬ್ರೇಕಿಂಗ್ ನ್ಯೂಸ್
21-07-21 10:42 pm Mangaluru Correspondent ಕ್ರೈಂ
ಮಂಗಳೂರು, ಜುಲೈ 21: ಭಜನಾ ಮಂದಿರಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವುಗೈದ ಘಟನೆ ನೀರುಮಾರ್ಗದಲ್ಲಿ ನಡೆದಿದ್ದು ಇದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ನೀರುಮಾರ್ಗ ಜಂಕ್ಷನ್ ಬಳಿಯ ಸುಬ್ರಹ್ಮಣ್ಯ ಭಜನಾ ಮಂದಿರದ ಮುಂಭಾಗಕ್ಕೆ ಬುಧವಾರ ನಸುಕಿನ 1.45ರ ಸುಮಾರಿಗೆ ಬಂದಿದ್ದ ಕಳ್ಳರು ಬಾಗಿಲು ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂ.ಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.
ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಡಿಸೋಜ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Thieves steal Gold from Neermarga Bhajana Mandira recorded in CCTV. Case filed at Kankandy Rural police station.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am