ಬ್ರೇಕಿಂಗ್ ನ್ಯೂಸ್
23-07-21 03:29 pm Headline Karnataka News Network ಕ್ರೈಂ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧನವಾಗಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾರನ್ನು ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ.
ಜುಲೈ 19 ರಂದು ಮುಂಬೈ ಪೊಲೀಸರು ರಾಜ್ ಕುಂದ್ರಾರನ್ನು ಬಂಧಿಸಿದ್ದರು. ಜುಲೈ 23ರವರೆಗೂ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಅವಧಿ ಮುಗಿದ ಹಿನ್ನೆಲೆ ಶನಿವಾರ ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ರಾಜ್ ಕುಂದ್ರಾ ತನಿಖೆಗೆ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಇನ್ನು ನಾಲ್ಕು ದಿನ ವಶಕ್ಕೆ ಪಡೆಯುವಂತೆ ಮುಂಬೈ ಕೋರ್ಟ್ ಪೊಲೀಸರಿಗೆ ಸೂಚಿಸಿದೆ.
ಫೆಬ್ರವರಿಯಲ್ಲಿ ಪ್ರಕರಣ ದಾಖಲು
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಈ ಕೇಸ್‌ನಲ್ಲಿ ರಾಜ್ ಕುಂದ್ರಾ ಜುಲೈ 19 ರಂದು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್‌ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.
ಈ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ್ದ ಪೂನಂ ಪಾಂಡೆ, ರಾಜ್ ಕುಂದ್ರಾ ಅವರೇ ನನ್ನನ್ನು ಈ ಅಶ್ಲೀಲ ಜಗತ್ತಿಗೆ ಪರಿಚಯಿಸಿದ್ದು, ನನಗೆ ಬೆದರಿಕೆ ಹಾಕಿ ವಿಡಿಯೋ ಮಾಡುತ್ತಿದ್ದರು. ಅವರ ಸಂಸ್ಥೆ ಜೊತೆ ಒಪ್ಪಂದ ಕಡಿದುಕೊಂಡಿದ್ದಕ್ಕೆ ನನ್ನ ಖಾಸಗಿ ನಂಬರ್ ಮತ್ತು ಸಂದೇಶಗಳನ್ನು ಸೋರಿಕೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯ ಯಾವುದೇ ಪಾತ್ರ ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Raj Kundra had a tie-up with a London-based company involved in streaming pornographic content through Hotshots, a mobile app, according to Mumbai Police.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm