ಬ್ರೇಕಿಂಗ್ ನ್ಯೂಸ್
10-08-21 01:35 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 10 : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಡ್ರಗ್ಸ್ ದಂಧೆಕೋರರನ್ನು ಸಿ.ಟಿ. ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದು, 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ರಾಜಸ್ಥಾನ ಮೂಲದ ಪಪ್ಪುರಾಮ್ ಅಲಿಯಾಸ್ ಪಪ್ಪು (20), ಚುನ್ನಿಲಾಲ್ (20) ಬಂಧಿತರು. ಆರೋಪಿಗಳಿಂದ ಒಂದು ಕೆ.ಜಿ 820 ಗ್ರಾಂ ಬ್ರೌನ್ ಶುಗರ್, 859 ಗ್ರಾಂ ಎಂಡಿಎಂಎ, ಒಂದು ಕೆಜಿ ಮಿಕ್ಸಿಂಗ್ ಪೌಡರ್, 1,700 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರು, ದ್ವಿಚಕ್ರ ವಾಹನ, ಎರಡು ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಮಾದಕ ವಸ್ತುವಿನ ಮೌಲ್ಯ ರೂ.2 ಕೋಟಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಎಂ. ಪಾಟೀಲ್ ಅವರು ಹೇಳಿದ್ದಾರೆ.
ಬಂಧಿತ ಪಪ್ಪುರಾಮ್ ಬಿಎ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. ಆರೋಪಿಗಳು ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು. ತಮ್ಮ ಪರಿಚಿತ ಗ್ರಾಹಕರಿಗೆ ಮಾತ್ರ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಸುಳಿವು ಸಿಗಬಾರದು ಎಂಬ ಕಾರಣದಿಂದ ಹೊಸಬರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ಇವರಿಗಾಗಿ ಶೋಧ ನಡೆಸುತ್ತಿದ್ದರು.
ಆರೋಪಿಗಳಿಬ್ಬರು ಗೋಡೌನ್ ಸ್ಟ್ರೀಟ್ ನಲ್ಲಿ ಭಾನುವಾರ ಸಂಜೆ 5.30ರ ಸುಮಾರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರ ತಂಡಕ್ಕೆ ಮಾಹಿತಿ ಲಭ್ಯವಾಗಿತ್ತು. ಕಾರ್ಯಾಚರಣೆ ನಡೆಸಿದ ಇನ್ಸ್ ಪೆಕ್ಟರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
ಪಪ್ಪುರಾಮ್ ಚಂದಾಪುರ, ಆನೇಕಲ್ ಭಾಗದಲ್ಲಿ ಮನೆ ಮಾಡುತ್ತಿದ್ದ. ಪ್ರತಿ ಮೂರು ತಿಂಗಳಿಗೊಮ್ಮೆ ಮನೆ ಹಾಗೂ ಸಿಮ್ ಕಾರ್ಡ್ ಬದಲಿಸುತ್ತಿದ್ದ. ಮಾದಕ ವಸ್ತುವನ್ನು ಸಂಗ್ರಹಿಸಿ ಇಡಲು ಒಂದು ಸಣ್ಣ ರೂಮ್ ಮಾಡಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The City Market police have arrested two men from Rajasthan for drug peddling, and have seized drugs worth Rs 2 crore. The duo, Pappuram alias Raj alias Ravi Purohit and Chunnilal alias Sunil, are both aged 20 years, and hail from Rajasthan. They are residents of Attibele.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
08-05-25 11:44 pm
HK News Desk
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm