ಬ್ರೇಕಿಂಗ್ ನ್ಯೂಸ್
14-08-21 12:55 pm Udupi Correspondent ಕ್ರೈಂ
ಉಡುಪಿ, ಆ.13: 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭವತಿ ಮಾಡಿಸಿದ್ದ ಪ್ರಕರಣದಲ್ಲಿ ಆರೋಪ ಸಾಕ್ಷ್ಯಾಧಾರಗಳಿಂದ ಸಾಬೀತಾಗಿದ್ದು, ಆರೋಪಿಯನ್ನು ಕೋರ್ಟ್ ಅಪರಾಧಿಯೆಂದು ಘೋಷಣೆ ಮಾಡಿದೆ.
ವಿಚಾರಣೆ ನಡೆಸಿದ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಶಿಕ್ಷೆ ಪ್ರಕಟಿಸಿದ್ದಾರೆ.
ಕೂಲಿ ಕೆಲಸ ಮಾಡುತ್ತಿದ್ದ 30 ವರ್ಷ ಪ್ರಾಯದ ಶಂಕರ್ ಎಂಬಾತ ಅಪರಾಧಿಯಾಗಿದ್ದು ಆತ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ, 15 ಸಾವಿರ ರೂ. ದಂಡ ವಿಧಿಸಲಾಗಿದೆ.
ದಂಡ ಪಾವತಿಸದಿದ್ದಲ್ಲಿ 1 ವರ್ಷ ಹೆಚ್ಚುವರಿ ಶಿಕ್ಷೆ, ಕೊಲೆ ಬೆದರಿಕೆ ಹಾಕಿದ್ದಕ್ಕೆ 3 ವರ್ಷ ಜೈಲು, 5 ಸಾವಿರ ರೂ. ದಂಡ ವಿಧಿಸಿದ್ದು ದಂಡ ತೆರದಿದ್ದರೆ 6 ತಿಂಗಳು ಸಾದಾ ಸಜೆಗೆ ಆದೇಶಿಸಲಾಗಿದೆ.
ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 5 ಲಕ್ಷ ಪರಿಹಾರ ನೀಡಲು ಮತ್ತು ದಂಡದ ಹಣದಲ್ಲಿ ಸಂತ್ರಸ್ತೆಗೆ 15 ಸಾವಿರ ಹಾಗೂ 5 ಸಾವಿರ ಸರಕಾರಕ್ಕೆ ನೀಡಲು ಉಡುಪಿ ಫೋಕ್ಸೋ ಕೋರ್ಟ್ ತೀರ್ಪು ನೀಡಿದೆ.
ಕಾರ್ಕಳ ಪೊಲೀಸ್ ವೃತ್ತ ವ್ಯಾಪ್ತಿಯಲ್ಲಿ 2018ರಲ್ಲಿ ಪ್ರಕರಣ ನಡೆದಿತ್ತು. ಸಂತ್ರಸ್ತ ಬಾಲಕಿ ಮನೆಗೆ ಬಂದ ಶಂಕರ್ ಅತ್ಯಾಚಾರ ಎಸಗಿದ್ದು ಬಳಿಕ ಆಕೆ ಗರ್ಭವತಿಯಾಗಿದ್ದಳು. ವಿಚಾರ ತಿಳಿದಾಗ ಆಕೆಯ ಪೋಷಕರು ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿಯನ್ನು ಬಂಧಿಸಲಾಗಿತ್ತು.
ಅಂದಿನ ಕಾರ್ಕಳ ವೃತ್ತ ನಿರೀಕ್ಷಕ ಜಾಯ್ ಅಂತೋನಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ 21 ಸಾಕ್ಷಿಗಳ ಪೈಕಿ 11 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದು ಡಿಎನ್‌ಎ ವರದಿ ಹಾಗೂ ಸಂತ್ರಸ್ತ ಬಾಲಕಿ ಸಹಿತ ವಿವಿಧ ಸಾಕ್ಷ್ಯಗಳು ಪೂರಕವಾಗಿದ್ದರಿಂದ ವಾದ ಆಲಿಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
Special judge of POCSO fast track court at the district additional and sessions court Ermalu Kalpana pronounced a landmark judgement in the case of a man who sexually harassed a 13-year-old girl and impregnated her, three years ago, under the limits of Karkala police station circle. Shankar (30), a daily wage labourer, is the convict. He is sentenced to life under POCSO for sexually harassing the minor girl and slapped with a fine of Rs 15,000. If he fails to pay the fine, he will have to undergo one year of simple imprisonment. In addition, the convict has to serve three years of imprisonment for threatening with life and a fine of Rs 5,000.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 09:06 pm
Mangalore Correspondent
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm