ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ವಿಜಯಪುರದಲ್ಲಿ 12 ಕಿಲೋ ಹಸಿ ಗಾಂಜಾ ಗಿಡ ಜಪ್ತಿ

07-09-20 11:44 am       Headline Karnataka News Network   ಕ್ರೈಂ

ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.

ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್​ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.

ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.

ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.

ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.