ಬ್ರೇಕಿಂಗ್ ನ್ಯೂಸ್
02-09-21 01:34 pm Mangaluru Correspondent ಕ್ರೈಂ
ಪುತ್ತೂರು, ಸೆ.2: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದಿದ್ದ ರಾಯಚೂರು ಮೂಲದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32), ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ಷೇರ್ ಚಾಟ್ ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ಭೇಟಿಯಾಗುವ ಉದ್ದೇಶದಿಂದ ಬುಧವಾರ ಮಧ್ಯಾಹ್ನ ರಾಯಚೂರು ಮೂಲದ ಹನುಮಂತರಾಯ ಎಂಬಾತ ಬಂದಿದ್ದ. ಪುತ್ತೂರು ಕೆಎಸ್ ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯ ಜೊತೆ ಮಾತನಾಡುತ್ತಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ ಗ್ರಾಮದ ನಿವಾಸಿ, ಯುವಕ ಹನುಮಂತರಾಯ(19) ಆರು ತಿಂಗಳ ಹಿಂದೆ ಹುಡುಗಿಯ ಪರಿಚಯ ಆಗಿದ್ದು ಚಾಟಿಂಗ್ ಮತ್ತು ಫೋನ್ ನಂಬರ್ ಪಡೆದು ಮಾತನಾಡುತ್ತಿದ್ದರು. ಹುಡುಗಿಯನ್ನು ಭೇಟಿಯಾಗಲೆಂದು ತನ್ನ ಸ್ನೇಹಿತ ಚೌಡಯ್ಯ ಎಂಬ ಯುವಕನೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ, ಹುಡುಗಿ ತನ್ನ ಸ್ನೇಹಿತೆಯ ಜೊತೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಾಲ್ವರೂ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ, ಐದಾರು ಮಂದಿ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹನುಮಂತರಾಯ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೇ ಸ್ನೇಹದ ನೆಪದಲ್ಲಿ ಭೇಟಿಯಾಗಿದ್ದನ್ನೇ ನೆಪವಾಗಿರಿಸಿ ಮುಸ್ಲಿಂ ಗುಂಪು ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರು ನಡೆಸುವ ನೈತಿಕ ಪೊಲೀಸ್ ರೀತಿಯ ವರ್ತನೆಯೇ ಆಗಿತ್ತು.
Puttur Group of people intercepts questions two men woman seen together
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am