ಬ್ರೇಕಿಂಗ್ ನ್ಯೂಸ್
07-09-20 07:21 pm Headline Karnataka News Network ಕ್ರೈಂ
ಬೆಂಗಳೂರು,ಸೆಪ್ಟೆಂಬರ್.7 : ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮಗಳ ಮೇಲೆ ಕೊಲೆಯತ್ನ ನಡೆದಿರುವ ಘಟನೆ ಕಾಮಾಕ್ಯ ಬಳಿಯ ಇಂದಿರಾ ಕ್ಯಾಂಟೀನ್ ಎದುರು ಸೆಪ್ಟಂಬರ್ 4ರಂದು ನಡೆದಿದೆ.
ತಾಯಿ ಹಾಗೂ ಮಗಳು ಬೈಕ್ನಲ್ಲಿ ಹೋಗುತ್ತಿದ್ದಾಗ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ದೀಪಾ ಶ್ರೀಕುಮಾರ್ ಮತ್ತು ಆಕೆಯ ಮೊದಲ ಮಗಳು ಹಿಷಿತಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಸಾರ್ವಜನಿಕರು ಅತ್ತ ಧಾವಿಸುವುದನ್ನು ಕಂಡ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ತಾಯಿ ಮಗಳನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೆ ಯತ್ನ ನಡೆಸಿರುವ ದೃಶ್ಯಾವಳಿ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ದೀಪಾ ಅವರು ಆಸ್ಟಿನ್ ಸ್ಕೂಲ್ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್ನಲ್ಲಿ ವ್ಯಾಜ್ಯ ನಡೆಯುತ್ತಿದೆ

ಇದೀಗ ಶ್ರೀಕುಮಾರ್, ಅವರ ಪುತ್ರ ಜಯಂತ್, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm