ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಸುಶಾಂತ್​ ಸಿಂಗ್​ ಸಾವಿನ ಪ್ರಕರಣ; ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್

08-09-20 05:05 pm       Headline Karnataka News Network   ಕ್ರೈಂ

ಮೂರನೇ ದಿನ ರಿಯಾ ಎಂದಿನಂತೆ ಎನ್​ಸಿಬಿ ನಡೆಸುತ್ತಿರುವ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ನಟಿ ರಿಯಾ ಅವರನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈ, ಸೆಪ್ಟೆಂಬರ್ 7: ಸುಶಾಂತ್​ ಸಿಂಗ್​ ರಜಪೂತ್​ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋಯವರು (ಎನ್​ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್​ ಚಕ್ರವರ್ತಿ ಅವರನ್ನು ಗ್ರಿಲ್​ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್​ ಮಾಡಿದ್ದಾರೆ.

ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್​ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್​ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್​ನಲ್ಲಿ ಮಾರಿಜುವಾನಾ ಮಿಕ್ಸ್​ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್​ ಸಿಂಗ್​ ಸಹ ತಮ್ಮ ಜತೆಗೆ ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.

ಇನ್ಸುನು ಶಾಂತ್​ ಸಿಂಗ್​ ರಜಪೂತ್​ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್​ ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್​ಗೆ ಎಂಟ್ರಿಯಾದ ನಂತರ ಸುಶಾಂತ್​ ಡ್ರಗ್ಸ್​ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್​’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್​ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್​ ಅಷ್ಟೇ ಅಲ್ಲ, ಬಾಲಿವುಡ್​ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್​ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್​ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್​ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.