ಬ್ರೇಕಿಂಗ್ ನ್ಯೂಸ್
 
            
                        11-09-21 01:48 pm Headline Karnataka News Network ಕ್ರೈಂ
 
            ಮುಂಬೈ, ಸೆ.11 : ಇಲ್ಲಿನ ಸಾಕಿ ನಾಕಾ ಪ್ರದೇಶದಲ್ಲಿ ಭೀಕರವಾಗಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ 33 ಗಂಟೆ ಸಾವು ಬದುಕಿನ ನಡುವೆ ಹೋರಾಡಿ ಮೃತಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಾಟ್ಕೋಪರ್‌ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಸದೇ ಸಂತ್ರಸ್ತೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಾಕಿ ನಾಕಾ ಪ್ರದೇಶದಲ್ಲಿ ಕಳೆದ ಶುಕ್ರವಾರ 34 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಶುಕ್ರವಾರ ಬೀಕರ ಅತ್ಯಾಚಾರ ಎಸಗಿದ್ದ, ಚಲಿಸುತ್ತಿದ್ದ ಟೆಂಪೊವೊಂದರಲ್ಲಿ ಈ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು.


ನಿರ್ಭಯಾ ಪ್ರಕರಣದಂತೆ ಈ ಪ್ರಕರಣದಲ್ಲೂ ಕ್ರೌರ್ಯದ ಪರಾಕಾಷ್ಠೆಯನ್ನು ಮೆರೆಯಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಆರೋಪಿಯು ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ಸಲಾಕೆ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾಗಿ ತಿಳಿದುಬಂದಿದೆ.
ಈ ಕೃತ್ಯವು ಒಬ್ಬ ವ್ಯಕ್ತಿಯಿಂದ ಎಸಗಲ್ಪಟ್ಟಿದೆಯೇ ಅಥವಾ ಇದು ಸಾಮೂಹಿಕ ಅತ್ಯಾಚಾರವೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 307, 376, 323, ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
Read: ರಸ್ತೆ ಬದಿಯಲ್ಲೇ ಯುವತಿಯ ರೇಪ್, ಟೆಂಪೋದಲ್ಲಿ ಎಸೆದು ಪರಾರಿ ! ಅರೆ ಪ್ರಜ್ಞೆಯಲ್ಲಿದ್ದ ಯುವತಿ ರಕ್ಷಿಸಿದ ಪೊಲೀಸರು
 
            
            
            The 32-year-old woman, who was raped and brutalized with rod, succumbed to her injuries following excessive bleeding at a civic hospital a short while ago, an official said. "It's a tragic end... She had suffered very severe internal injuries and has passed away," Shiv Sena MLC Manisha Kayande told IANS.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm