ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಡ್ರಗ್ಸ್ ನಂಟು ; ನಟಿ ಸಂಜನಾ 5 ದಿನ ಸಿಸಿಬಿ ಪೊಲೀಸರ ವಶಕ್ಕೆ

08-09-20 06:16 pm       Bangalore Correspondent   ಕ್ರೈಂ

ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಬೆಂಗಳೂರು, ಸೆಪ್ಟಂಬರ್ 8: ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಈಗಷ್ಟೇ ಸಿಸಿಬಿ ಪೊಲೀಸರು ನಟಿ ಸಂಜನಾರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 8ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಈ ವೇಳೆ ಸಿಸಿಬಿ ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಧೀಶರು ವಿಚಾರಣೆ ನಡೆಸಿದರು. ಈಗ 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ನಟಿ ರಾಗಿಣಿ ಬೆನ್ನಲ್ಲೀಗ ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಿದ್ದಾರೆ. ಡ್ರಗ್ಸ್ ದಂಧೆ ಸಂಬಂಧ ರಾಹುಲ್ ಶೆಟ್ಟಿ ಎಂಬುವವರನ್ನು ಸಿಸಿಬಿ ಬಂಧಿಸಿದ್ದರು. ಈ ವೇಳೆ ಸಂಜನಾ ಬಗ್ಗೆ ಪೊಲೀಸರ ರಾಹುಲ್ ಶೆಟ್ಟಿ ಬಾಯಿಬಿಟ್ಟಿದ್ದ. ರಾಹುಲ್ ಜೊತೆ ಹಲವು ಪಾರ್ಟಿಗಳಲ್ಲಿ ಸಹ ಸಂಜನಾ ಕಾಣಿಸಿಕೊಳ್ಳುತ್ತಿದ್ದರು ಎನ್ನಲಾಗಿತ್ತು. ಹೀಗಾಗಿ ಸಂಜನಾರನ್ನು ಪೊಲೀಸರು ಬಂಧಿಸಿದ್ದಾರೆ.