ಬ್ರೇಕಿಂಗ್ ನ್ಯೂಸ್
15-09-21 12:57 pm Headline Karnataka News Network ಕ್ರೈಂ
ಬೆಂಗಳೂರು, ಸೆ.15: ಪ್ರೇಮದ ಬಲೆ ಬೀಸಿ ಯುವತಿಯರನ್ನು ಪ್ರೀತಿಯಲ್ಲಿ ಬೀಳಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ಬ್ಲ್ಯಾಕ್‍ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದವನನ್ನು ನಗರದ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಬಂಧಿಸಿರುವುದು ಬೆಳಕಿಗೆ ಬಂದಿದೆ.
ಬ್ಯಾಡರಹಳ್ಳಿಯ ರಾಕೇಶ್ (26) ಬಂಧಿತ ಆರೋಪಿಯಾಗಿದ್ದಾನೆ. ಆತನಿಂದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಮೊಬೈಲ್ ಪರಿಶೀಲಿಸಿದಾಗ ಬರೋಬ್ಬರಿ ಆರು ಯುವತಿಯರ ಖಾಸಗಿ ದೃಶ್ಯ ಸೆರೆ ಹಿಡಿದು ಹಿಂಸಿಸುತ್ತಿದ್ದ ಎಂಬುದು ಬಯಲಾಗಿದೆ. ದೂರುದಾರೆ 24 ವರ್ಷದ ಸಂತ್ರಸ್ತೆ ನಗರದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಆಕೆಗೆ ಆರೋಪಿ ರಾಕೇಶ್‍ನ ಪರಿಚಯವಾಗಿತ್ತು. ರಾಕೇಶ್ ಪ್ರೀತಿಸುವುದಾಗಿ ಹೇಳಿ ಸಂತ್ರಸ್ತೆಗೆ ಪ್ರೇಮ ನಿವೇದನೆ ಮಾಡಿದ್ದ. ಆತ ನಿಜವಾಗಿಯೂ ಪ್ರೀತಿಸುತ್ತಿದ್ದಾನೆಂದು ಭಾವಿಸಿದ ಯುವತಿ, ಆತನ ಪ್ರೇಮ ನಿವೇದನೆಯನ್ನು ಒಪ್ಪಿಕೊಂಡಿದ್ದಳು. ನಂತರ ಇಬ್ಬರೂ ವಾಟ್ಸ್ಯಾಪ್‍ನಲ್ಲಿ ಚಾಟಿಂಗ್ ಮಾಡಿಕೊಂಡು ಸಲುಗೆ ಬೆಳೆಸಿಕೊಂಡಿದ್ದರೆಂದು ಎಂದು ಪೊಲೀಸರು ಹೇಳಿದ್ದಾರೆ.

ಖಾಸಗಿ ದೃಶ್ಯ ಸೆರೆ, ಹಣಕ್ಕೆ ಡಿಮ್ಯಾಂಡ್ ;
ಸಲುಗೆ ಬೆಳೆದ ನಂತರ ಕೆಲವು ದಿನಗಳ ಹಿಂದೆ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆರೋಪಿ ಆಕೆಯ ಗಮನಕ್ಕೆ ಬಾರದಂತೆ ತನ್ನ ಮೊಬೈಲ್‍ನಲ್ಲಿ ಖಾಸಗಿ ದೃಶ್ಯ ಸೆರೆ ಹಿಡಿದಿದ್ದ. ಕೆಲ ದಿನಗಳ ಬಳಿಕ ಯುವತಿಯ ವಾಟ್ಸಪ್ಗೆೆ ಖಾಸಗಿ ದೃಶ್ಯ ಕಳುಹಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಸುತ್ತಿದ್ದ. ಆತಂಕಗೊಂಡ ಯುವತಿ ಆರೋಪಿಗೆ ಹಂತ ಹಂತವಾಗಿ ಒಟ್ಟು 2 ಲಕ್ಷ ರೂಗಳಿಗೂ ಅಧಿಕ ಹಣ ನೀಡಿದ್ದಳು. ಇಷ್ಟಕ್ಕೆ ಸುಮ್ಮನಾಗದ ಆರೋಪಿ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದ. ಕಂಗಾಲಾದ ಸಂತ್ರಸ್ತೆ ಬ್ಯಾಡರಹಳ್ಳಿ ಠಾಣೆಗೆ ದೂರು ನೀಡಿದ್ದಳು.

ಹಲವು ಯುವತಿಯರಿಗೆ ವಂಚನೆ ;
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿ ರಾಕೇಶ್‍ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇನ್ನಷ್ಟು ಯುವತಿಯರಿಗೆ ಇದೇ ಮಾದರಿಯಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಮೊದಲಿಗೆ ಯುವತಿಯರನ್ನು ಪರಿಚಯಿಸಿಕೊಳ್ಳುತ್ತಿದ್ದ. ನಂತರ ಅವರೊಂದಿಗೆ ಸಲುಗೆ ಬೆಳೆಸಿ ಪ್ರೀತಿಸುವ ನಾಟಕವಾಡುತ್ತಿದ್ದ. ಆತನ ಮಾತಿಗೆ ಮರುಳಾಗಿ ಪ್ರೀತಿ ಒಪ್ಪಿಕೊಂಡರೆ ಯುವತಿಯರೊಂದಿಗೆ ತಾನು ಸಲುಗೆಯಿಂದಿರುವ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ. ಆತನ ಮೊಬೈಲ್ ಪರಿಶೀಲನೆ ವೇಳೆ ಐದಾರು ಯುವತಿಯರಿಗೆ ವಂಚಿಸಿರುವುದು ಕಂಡು ಬಂದಿದೆ. ಆದರೆ, ಮೋಸಕ್ಕೆ ಒಳಗಾದ ಇತರ ಯುವತಿಯರು ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Youth arrested for cheating girls and blackmailing over naked videos in Bengaluru. The arrested has been identified as Rakesh (26). It is said he used to take girls to isolated place have sex with them and them blackmail them with these videos.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm