ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಯುವಕನ ಕಿರುಕುಳ ; ಕಿರುತೆರೆಯ ಖ್ಯಾತ ಕಲಾವಿದೆ ಆತ್ಮಹತ್ಯೆ

09-09-20 01:13 pm       Headline Karnataka News Network   ಕ್ರೈಂ

ಇತ್ತೀಚೆಗೆ ಸೀರಿಯಲ್ ನಟ-ನಟಿಯರು ಆತ್ಮಹತ್ಯೆಯ ಮೊರೆ ಹೋಗುತ್ತಿರುವುದು ಹೆಚ್ಚಾಗುತ್ತಿದೆ. ಇದೇ ಸಾಲಿಗೆ ಇದೀಗ ತೆಲಗು ಧಾರಾವಾಹಿ ಖ್ಯಾತ ನಟಿ ಕೂಡ ಸೇರಿದ್ದಾರೆ.

ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.

ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.