ಬ್ರೇಕಿಂಗ್ ನ್ಯೂಸ್
25-09-21 12:10 pm Headline Karnataka News Network ಕ್ರೈಂ
ಮಂಗಳೂರು, ಸೆ.23 : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ ರಸ್ತೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ತೀರ್ಪು ನೀಡಿದ್ದಾರೆ.
ಬಂಟ್ವಾಳ ವಿಟ್ಲ ಕಸಬಾ ಉಕ್ಕುಡದ ಬಾಲಕೃಷ್ಣ (25) ಎಂಬಾತ ಆರೋಪಿಯಾಗಿದ್ದು ಅಪರಾಧ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಸೆ.27ರಂದು ಪ್ರಕಟಿಸಲಿದ್ದಾರೆ. 2019ರ ಜುಲೈ 25ರಂದು ಬೆಳಗ್ಗೆ ಆರೋಪಿಗೆ ಪರಿಚಿತಳಾಗಿರುವ ಬಾಲಕಿಯು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ, ಆರೋಪಿ ಬಾಲಕೃಷ್ಣ ಸ್ನೇಹಿತ ಪರಶುರಾಮನ ಬೈಕ್‌ನಲ್ಲಿ ಆತನ ಸಹಕಾರದೊಂದಿಗೆ ಬಾಲಕಿಯನ್ನು ಅಪಹರಿಸಿದ್ದು ಬಿ.ಸಿ.ರೋಡ್ ವರೆಗೆ ಬೈಕ್‌ನಲ್ಲಿ ಕರೆದೊಯ್ದು ನಂತರ ಬಸ್‌ನಲ್ಲಿ ಮೂಡುಬಿದಿರೆ ನೆಲ್ಲಿಕಾರಿನ ಸಂಬಂಧಿಕರ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ನಂತರ ಆರೋಪಿಯು ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದು ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಆರೋಪಿ ಮತ್ತು ಬಾಲಕಿಯನ್ನು ಕಂಡ ಪೊಲೀಸರು ಸಂಶಯಗೊಂಡು ವಿಚಾರಿಸಿದಾಗ ಅದು ವಿಟ್ಲ ಠಾಣೆಗೆ ಸಂಬಂಧಿಸಿದ ಪ್ರಕರಣ ಎನ್ನುವುದು ಬೆಳಕಿಗೆ ಬಂದಿತ್ತು.
ನಂತರ ವಿಟ್ಲ ಪೊಲೀಸರು ಅವರಿಬ್ಬರನ್ನು ಕರೆತಂದಿದ್ದರು. ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ 18 ಮಂದಿ ಸಾಕ್ಷಿದಾರರನ್ನು ವಿಚಾರಿಸಲಾಗಿದೆ. ಅಪಹರಣಕ್ಕೆ ಸಹಕರಿಸಿದ ಆರೋಪದಲ್ಲಿ ಪರಶುರಾಮನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದಾರೆ.
Vitla Girl kidnapped and raped court sentences accused
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm