ಬ್ರೇಕಿಂಗ್ ನ್ಯೂಸ್
04-10-21 11:00 am Headline Karnataka News Network ಕ್ರೈಂ
ಮುಂಬೈ, ಅ.4 : ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರನ ಬಂಧನ. ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಎನ್‌ಸಿಬಿಯು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದೆ. ಮುಂಬೈನಲ್ಲಿ ಕ್ರೂಸ್ ಶಿಪ್ ಒಂದರ ಮೇಲೆ ನಿನ್ನೆ ರಾತ್ರಿ ಎನ್‌ಸಿಬಿ ಹಾಗೂ ಮುಂಬೈ ಪೊಲೀಸರು ದಾಳಿ ನಡೆಸಿದ್ದರು. ಆ ಕ್ರೂಸ್ ಶಿಪ್ ಪಾರ್ಟಿಯಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಸಹ ಇದ್ದರು. ಆರ್ಯನ್ ಹಾಗೂ ಇತರ 8 ಮಂದಿಯನ್ನು ನಿನ್ನೆಯೇ ವಶಕ್ಕೆ ಪಡೆದಿದ್ದ ಎನ್‌ಸಿಬಿ ಇಂದು ಬಂಧಿಸಿದೆ.
ಹಲವು ಗಂಟೆಗಳ ವಿಚಾರಣೆ ಬಳಿಕ ಇಂದು ಮಧ್ಯಾಹ್ನದ ಬಳಿಕ ಆರ್ಯನ್ ಅನ್ನು ಬಂಧಿಸಲಾಗಿದ್ದು, ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಾಳೆ ಆರ್ಯನ್ ಹಾಗೂ ಇತರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಆರ್ಯನ್ ಪರ ವಕೀಲ ಸತೀಶ್ ಮಾನೆಶಿಂಧೆ ಎನ್‌ಸಿಬಿ ಕಚೇರಿಗೆ ಆಗಮಿಸಿದ್ದಾರೆ.
ಆರ್ಯನ್ ಅನ್ನು ನಿನ್ನೆಯೇ ಪೊಲೀಸರು ವಶಕ್ಕೆ ಪಡೆದು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆರ್ಯನ್‌ನ ಮೊಬೈಲ್ ಮಾಹಿತಿಗಳನ್ನು ಸಹ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಡ್ರಗ್ಸ್ ಜಾಲದೊಂದಿಗೆ ಆರ್ಯನ್‌ಗೆ ಸಂಪರ್ಕವಿದೆಯಂದು ತಿಳಿದು ಬಂದಿದೆ.
ಆರ್ಯನ್ ಹಾಗೂ ಇತರರ ವಿಚಾರಣೆ ನಡೆವ ವೇಳೆಯೇ ಮುಂಬೈ ಎನ್‌ಸಿಬಿ ಕಚೇರಿಗೆ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಎನ್‌ಸಿಬಿ ಸಿಬ್ಬಂದಿ ಕರೆತಂದರು. ಅದೇ ವ್ಯಕ್ತಿ ನಿನ್ನೆ ನಡೆದ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡಿದ್ದ ಎನ್ನಲಾಗುತ್ತಿದೆ. ಎನ್‌ಡಿಪಿಎಸ್ ಸೆಕ್ಷನ್ 27ರ ಅನ್ವಯ ಆರ್ಯನ್ ಅನ್ನು ಬಂಧಿಸಲಾಗಿದ್ದು, ಆರ್ಯನ್ ಜೊತೆಗೆ ಮೂವರನ್ನು ಸಹ ಬಂಧಿಸಲಾಗಿದೆ. ಅರ್ಬಾಜ್ ಖಾನ್ ಹಾಗೂ ಮುನ್-ಮುನ್ ಧಮೇಚ್ಛ ಸಹ ಬಂಧನಕ್ಕೆ ಒಳಪಟ್ಟಿದ್ದಾರೆ. ಇವರ ಜೊತೆಗೆ ಮಹಿಳೆಯೊಬ್ಬರು ಸಹ ಇದ್ದಾರೆ ಎನ್ನಲಾಗುತ್ತಿದೆ. ಬಂಧಿತರಿಗೆ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದೆ. ಇಂದೇ ಈ ಮೂವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
On October 2, the NCB busted a rave party on the Cordelia cruise ship and detained 8 persons. Shah Rukh Khan's son Aryan Khan is among those being questioned in the Mumbai cruise drug bust case.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm