ಬ್ರೇಕಿಂಗ್ ನ್ಯೂಸ್
10-10-21 08:33 am Mangalore Reporter ಕ್ರೈಂ
ಪುತ್ತೂರು, ಅ.10: ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರವನ್ನು ಸೃಷ್ಟಿಸಿ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ವಂಚಕರ ಜಾಲವನ್ನು ಮಡಿಕೇರಿ ಪೊಲೀಸರು ಭೇದಿಸಿದ್ದಾರೆ. ಪುತ್ತೂರು ತಾಲೂಕಿನ ಸಾಲ್ಮರ ನಿವಾಸಿ ಪುನಿತ್ ಕುಮಾರ್(32) ಮತ್ತು ಮೈಸೂರಿನ ಗಾಯತ್ರಿಪುರದ ಅರುಣ್ ಕುಮಾರ್ (30) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮೈಸೂರಿನ ನಂಜರಾಯಪಟ್ಟಣದ ಕೆ.ಎಂ.ಯಶ್ವಿತಾ ಎಂಬ ಯುವತಿಗೆ ಮಡಿಕೇರಿ ಜಿಲ್ಲಾಧಿಕಾರಿಯ ಸಹಿ ನಕಲಿ ಮಾಡಿದ್ದಲ್ಲದೆ, ಅವರ ಹೆಸರಲ್ಲಿ ಉದ್ಯೋಗ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ನೀಡಿದ್ದರು. ಅಂಚೆಯಲ್ಲಿ ನೇಮಕಾತಿ ಪತ್ರವನ್ನು ನೀಡಿದ್ದಲ್ಲದೆ, ಇದಕ್ಕಾಗಿ 1.50 ಲಕ್ಷ ರೂಪಾಯಿ ಹಣ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಯಶ್ವಿತಾ ಜಿಲ್ಲಾಧಿಕಾರಿಗಳ ಬಳಿ ಮಾಹಿತಿ ಕೇಳಿದಾಗ, ಆರೋಪಿಗಳ ಟೊಳ್ಳುತನ ಬಯಲಾಗಿತ್ತು.
ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿಗಳು ಸಾರ್ವಜನಿಕ ಪ್ರಕಟಣೆಯನ್ನೂ ಹೊರಡಿಸಿ ಎಚ್ಚರಿಕೆ ರವಾನಿಸಿದ್ದರು. ಅಲ್ಲದೆ, ಜಿಲ್ಲಾಧಿಕಾರಿಯ ಸೂಚನೆಯಂತೆ ಶಿರಸ್ತೇದಾರ್ ಪ್ರಕಾಶ್, ಮಡಿಕೇರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ತನಿಖೆ ನಡೆಸಿ ಪ್ರಕರಣ ಸಂಬಂಧಿಸಿ ಚಂದ್ರಶೇಖರ್, ರಾಜಮಣಿ ಯಾನೆ ಲೋಕೇಶ್ ಮತ್ತು ಗಣಪತಿ ಯಾನೆ ಶಬರೀಶ ಎಂಬವರನ್ನು ಬಂಧಿಸಿದ್ದರು. ವಂಚಕರ ಜಾಲದ ಪ್ರಮುಖ ರೂವಾರಿ ಪುನೀತ್ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಪುತ್ತೂರಿನ ಕೆಮ್ಮಿಂಜೆಯಲ್ಲಿ ಬಂಧಿಸಿದ್ದಾರೆ.
ಎಸ್‌ಐ ಕೆಲಸಕ್ಕೆ ಆಮಿಷವೊಡ್ಡಿ ಸಿಕ್ಕಿಬಿದ್ದ ;
ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದಾಗ ಪೊಲೀಸರಿಗೆ ಬಹಳಷ್ಟು ಮಾಹಿತಿಗಳು ತಿಳಿದುಬಂದಿದ್ದವು. ಆರೋಪಿಗಳು ಪೊಲೀಸ್ ಇಲಾಖೆಯಲ್ಲಿಯೂ ಎಸ್ಐ ಇನ್ನಿತರ ಹುದ್ದೆಗಳನ್ನು ಮಾಡಿಕೊಡುತ್ತೇವೆಂದು ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿದ್ದರೆಂದು ತಿಳಿದುಬಂದಿತ್ತು. ಇದೇ ವೇಳೆ, ಮಡಿಕೇರಿಯಲ್ಲಿ ಎಸ್ಐ ಹುದ್ದೆ ಕೊಡಿಸುತ್ತೇನೆಂದು ಹೇಳಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಸಿಐಡಿ ಬೆಂಗಳೂರು ಘಟಕಕ್ಕೆ ವರ್ಗಾಯಿಸಿ ತನಿಖೆ ನಡೆಸುತ್ತಿರುವಾಗಲೇ ಪುನೀತ್ ಕುಮಾರ್ ಮತ್ತು ಮೈಸೂರಿನ ಅರುಣ್ ಕುಮಾರ್ ಅವರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಪುನೀತ್ ಬಳಿಯಿಂದ 5.50 ಲಕ್ಷ ರೂ. ನಗದು ಮತ್ತು 3 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಕೊಡಗು ಎಸ್ಪಿ ಕ್ಷಮಾ ಮಿಶ್ರಾ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಯಲ್ಲಿ ಗುಪ್ತದಳದ ನಿರೀಕ್ಷಕ ಐ.ಪಿ ಮೇದಪ್ಪ, ಅಪರಾಧ ಪತ್ತೆ ದಳದ ಸಹಾಯಕ ಠಾಣಾಧಿಕಾರಿ ಹಮೀದ್, ಸಿಬ್ಬಂದಿಗಳಾದ ಯೋಗೇಶ್ ಕುಮಾರ್, ನಿರಂಜನ್, ವಸಂತ, ವೆಂಕಟೇಶ್, ಶರತ್ ರೈ, ಸುರೇಶ್, ಅನಿಲ್ ಕುಮಾರ್, ಸಿಡಿಆರ್ ಘಟಕದ ರಾಜೇಶ್, ಗಿರೀಶ್ ಭಾಗವಹಿಸಿದ್ದರು.
Puttur Man arrested for cheating of giving Police SI jobs in Mangalore Mysuru and Madikeri by creating fake documents. The arrested has been identified as Puneeth Kumar.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm