ಬ್ರೇಕಿಂಗ್ ನ್ಯೂಸ್
19-10-21 09:24 am Mangaluru Correspondent ಕ್ರೈಂ
ಮಂಗಳೂರು, ಅ.19: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ವಕೀಲ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿ ವಿರುದ್ಧ ಸೆಕ್ಷನ್ 376, 376-2, 376(2)-ಕೆ, 376 ಸಿ, 511, 354(ಎ), 354(ಬಿ), 354 (ಸಿ), 354 (ಡಿ), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೆ.ಎಸ್.ಎನ್ ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ನಡೆಸುತ್ತಿದ್ದರು. ಲೋಕಾಯುಕ್ತ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದಿಸಲು ಸರಕಾರದಿಂದ ನೇಮಕಗೊಂಡ ವಕೀಲರಾಗಿದ್ದರು. ಹೀಗಾಗಿ ರಾಜೇಶ್ ಮಂಗಳೂರಿನಲ್ಲಿ ಒಳ್ಳೆಯ ಹೆಸರು ಗಳಿಸಿದ್ದರು. ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆ ಆಡಿಯೋ ಹರಿದಾಡಿತ್ತು. ಆಕೆಯನ್ನು ಕಚೇರಿಗೆ ಬರುವಂತೆ ಮತ್ತು ಮುಂದೆಂದೂ ಈ ರೀತಿ ನಡೆದುಕೊಳ್ಳಲ್ಲ. ಇಲ್ಲಿಗೇ ಬಿಟ್ಟು ಬಿಡು ಎಂದು ವಕೀಲ ಗೋಗರೆಯುವ ಆಡಿಯೋ ಇತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜೇಶ್, ಇದು ನನ್ನ ಇಮೇಜ್ ಹಾಳು ಮಾಡಲು ಯತ್ನಿಸುವ ಪ್ರಯತ್ನ. ನನ್ನನ್ನು ಲೋಕಾಯುಕ್ತ ಹುದ್ದೆಯಿಂದ ತೆರವುಗೊಳಿಸಲು ಕೆಲವು ವಕೀಲರೇ ಸೇರಿಕೊಂಡು ಈ ಕೆಲಸ ಮಾಡಿದ್ದಾರೆ. ಆಡಿಯೋ ತನ್ನದಲ್ಲ. ಯಾರೋ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದರು. ಈ ನಡುವೆ, ಸೋಮವಾರ ಸಂಜೆ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿದ್ದ ಎಬಿವಿಪಿ ನಿಯೋಗ, ವಕೀಲನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.
ಇದರ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ
Mangalore Police file FIR against Advocate KSN Rajesh of KSN Associates over rape attempt of staff at his office. The girl has filed a complaint stating that she was sexually harassed by the Advocate. Rajesh is said to be absconding
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm