ಬ್ರೇಕಿಂಗ್ ನ್ಯೂಸ್
19-10-21 12:15 pm Mangaluru Correspondent ಕ್ರೈಂ
ಉಳ್ಳಾಲ, ಅ.19: ಬೈಕಲ್ಲಿ ಹೊಂಚು ಹಾಕಿ ಕುಳಿತಿದ್ದ ಮೂವರು ಅಪರಿಚಿತರು ಬಿಜೆಪಿ ಪ್ರಮುಖನ ಮೇಲೆ ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ನಡೆದಿದೆ.
ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿಜೆಪಿ ಪ್ರಮುಖರಾದ ಪ್ರಕಾಶ್ ಶೆಟ್ಟಿ(41) ಎಂಬವರ ಮೇಲೆ ತಲವಾರು ದಾಳಿ ನಡೆದಿದೆ. ಸಮಯ ಪ್ರಜ್ಞೆ ಮೆರೆದ ಪ್ರಕಾಶ್ ಅವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಕೊಣಾಜೆ ವಿವಿ ಆವರಣದ ಹಾಸ್ಟೆಲ್ ಬಳಿಯ ದುರ್ಗಾ ಫ್ಯಾನ್ಸಿ & ಜನರಲ್ ಸ್ಟೋರ್ ನ ಮಾಲಕರಾದ ಪ್ರಕಾಶ್ ಅವರು ನಿನ್ನೆ ರಾತ್ರಿ 9.30 ಗಂಟೆಗೆ ಅಂಗಡಿ ಬಂದ್ ಮಾಡಿ ಮನೆ ಕಡೆಗೆ ಹೊರಟಿದ್ದರು. ಅಂಗಡಿಯ ಅನತಿ ದೂರದಲ್ಲಿ ಕಪ್ಪು ಪಲ್ಸರ್ ಬೈಕಿನಲ್ಲಿ ಕಾದು ಕುಳಿತಿದ್ದ ಮೂವರು ಯುವಕರನ್ನು ಪ್ರಕಾಶ್ ಮೊದಲೇ ಗಮನಿಸಿದ್ದರು ಎನ್ನಲಾಗಿದೆ. ಹೀಗಾಗಿ ಪ್ರಕಾಶ್ ಅವರು ಅಂಗಡಿ ಬಂದ್ ಮಾಡಿ ಪರಿಚಯಸ್ಥ ಮಂಜುನಾಥ್ ಎಂಬವರ ಬೈಕ್ ಏರಿ ಹೊರಟಾಗ ಹಿಂದಿನಿಂದ ಬೈಕ್ ನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಪ್ರಕಾಶ ಅವರನ್ನು ಗುರಿಯಾಗಿಸಿ ತಲವಾರು ಬೀಸಿದ್ದಾರೆ. ಅಪಾಯದ ಮುನ್ಸೂಚನೆ ಅರಿತಿದ್ದ ಪ್ರಕಾಶ್ ಶೆಟ್ಟಿ ತಲವಾರು ಏಟನ್ನು ತಪ್ಪಿಸಲು ಯತ್ನಿಸಿದಾಗ ಇವರ ಬೈಕ್ ಉರುಳಿ ಬಿದ್ದಿದೆ. ಕೂಡಲೇ ಬೈಕ್ ಚಾಲಕ ಮತ್ತು ಪ್ರಕಾಶ್ ಹತ್ತಿರದ ಜನ ವಸತಿ ಸ್ಥಳಕ್ಕೆ ಓಡಿ ಬಚಾವಾಗಿದ್ದಾರೆ. ಪ್ರಕಾಶ್ ಬಲ ಕೈಗೆ ತಲವಾರಿನ ಏಟು ತಗಲಿದ್ದು ಈ ಬಗ್ಗೆ ಅವರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರತೀಕಾರಕ್ಕೆ ದಾಳಿ ನಡೆದಿರುವ ಶಂಕೆ
ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಆರೋಪಿಯ ಬಂಧನಕ್ಕೆ ಪ್ರಕಾಶ್ ಶೆಟ್ಟಿ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದಲ್ಲದೆ ಸಮಾಜ ಘಾತುಕ ದುಷ್ಕೃತ್ಯಗಳ ವಿರುದ್ಧ ಪ್ರಕಾಶ್ ಶೆಟ್ಟಿ ಹೋರಾಟ ನಡೆಸುತ್ತಾ ಬಂದಿದ್ದರು. ಇದೇ ನೆಲೆಯಲ್ಲಿ ಪ್ರತೀಕಾರ ತೀರಿಸಲು ತಲವಾರು ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.
ಸ್ವೀಟ್ ಖರೀದಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ; ಕೊಣಾಜೆ ಸ್ಟೋರ್ಸ್ ಮಾಲಕನ ಪುತ್ರನ ಬಂಧನ
Mangalore Konaje Bike Borne Miscreants attack BJP member Prakash Shetty in talwar last night, escapes from death. Konaje police are now investigating the case.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm