ಬ್ರೇಕಿಂಗ್ ನ್ಯೂಸ್
20-10-21 12:16 pm Mangaluru Correspondent ಕ್ರೈಂ
ಮಂಗಳೂರು, ಅ.20: ಉಳ್ಳಾಲದ ಸೋಮೇಶ್ವರ ತೀರದಲ್ಲಿ ಮರಳನ್ನು ಅಕ್ರಮವಾಗಿ ಟಿಪ್ಪರ್ ಲಾರಿಗಳಲ್ಲಿ ತುಂಬಿಸಿ, ಸಾಗಿಸುತ್ತಿದ್ದಾಗ ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಒಂದು ಜೆಸಿಬಿ, ಎರಡು ಟಿಪ್ಪರ್ ಲಾರಿ, ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಸೋಮೇಶ್ವರದ ಪೆರಿಬೈಲ್ ನಲ್ಲಿ ನಿನ್ನೆ ತಡರಾತ್ರಿ 12.30ರ ಸುಮಾರಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಟಿಪ್ಪರ್ ಲಾರಿಗೆ ಮರಳನ್ನು ತುಂಬಿಸುತ್ತಿದ್ದ 7-8 ಜನ ಪೊಲೀಸರನ್ನು ನೋಡಿ ಓಡಿ ಹೋಗಿದ್ದಾರೆ. ಅಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ತಲಪಾಡಿ ನಿವಾಸಿ ರಾಯಲ್ ಡಿಸೋಜ (21) ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಮರಳು ಲಾರಿಗೆ ಬೆಂಗಾವಲಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದು, ಯಾವುದೇ ಪರವಾನಿಗೆ ಇಲ್ಲದೆ ಮರಳು ಸಂಗ್ರಹಿಸುತ್ತಿರುವುದಾಗಿ ತಿಳಿಸಿದ್ದಾನೆ. ಅದರಂತೆ, ರಾಯಲ್ ಡಿಸೋಜ ಮತ್ತು ಮಯ್ಯದಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಲ್ಲಿ ಶೇಖರಿಸಿಟ್ಟಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆತನ ಮಾಹಿತಿಯಂತೆ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಇಲ್ಯಾಸ್ ಕೆಸಿ ರೋಡ್, ನೌಶಾದ್, ಫಯಾಜ್ ಕಲ್ಲಾಪು ಇನ್ನಿತರರ ವಿರುದ್ಧ ಕೇಸು ದಾಖಲಿಸಿದ್ದಾರೆ. ಉಳ್ಳಾಲ ಭಾಗದಲ್ಲಿ ಅಕ್ರಮ ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಅಲ್ಲಿನ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಅನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಹಿತಿ ಅರಿತಿದ್ದ ಡಿಸಿಪಿ ಹರಿರಾಮ್ ಶಂಕರ್ ಮತ್ತು ಎಸಿಪಿ ರಂಜಿತ್ ಬಂಡಾರು ಜಂಟಿಯಾಗಿ ಮರಳು ಮಾಫಿಯಾ ವಿರುದ್ಧ ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಮುದ್ರದಿಂದ ಮರಳೆತ್ತುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
Two trucks, Two arrested for illegal sand transportation at Uchila in Mangalore. Mangalore Law and Order DCP Hariram Shankar and team raided the spot and have arrested the accused.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm