ಬ್ರೇಕಿಂಗ್ ನ್ಯೂಸ್
20-10-21 05:38 pm Bengaluru Correspondent ಕ್ರೈಂ
ಬೆಂಗಳೂರು, ಅ.20: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಬೆಂಗಳೂರು ಕ್ರೈಮ್ ಬ್ರಾಂಚ್ ಪೊಲೀಸರು ಭೇದಿಸಿದ್ದು, 27 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಹಲವರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 78 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಲ್ಲಿ ಹೊಟೇಲ್ ಒಂದರಲ್ಲಿ ಕುಳಿತು ಆನ್ ಲೈನ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಇತ್ತೀಚೆಗೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತಾ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಭಾರೀ ಮೊತ್ತದ ಬೆಟ್ಟಿಂಗ್ ನಡೆದಿತ್ತು. ಇದೇ ವೇಳೆ, ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕೇರಳದ ತೃಶೂರು ಮೂಲದ ಗೋಕುಲ್, ಕಿರಣ್ ಮತ್ತು ಸಜೀವ್ ಎಂಬವರನ್ನು ಬಂಧಿಸಲಾಗಿದೆ. ಅಲ್ಲದೆ, ಚೆನ್ನೈ ಮೂಲದ ಸೂರ್ಯ ಮತ್ತು ಕಪಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವರು ಬೆಟ್ಟಿಂಗ್ ಜಾಲದಲ್ಲಿ ಹಣ ತೊಡಗಿಸಿದ್ದರು. ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು ಬೆಟ್ಟಿಂಗ್ ಜಾಲದಲ್ಲಿ ತೊಡಗಿಸಿದ್ದ ಲ್ಯಾಪ್ ಟಾಪ್, ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಬಾಣಸವಾಡಿಯಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎರಡು ವಾರಗಳ ಹಿಂದೆ ದೆಹಲಿಯಲ್ಲಿ ಇಬ್ಬರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದರು. ಆ ತಂಡಕ್ಕೂ ಇಲ್ಲಿನ ತಂಡಕ್ಕೂ ಲಿಂಕ್ ಇದೆಯಾ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.
Bengaluru Central Crime Branch (CCB) police have booked a total of 20 cricket betting cases and seized Rs 78 lakh, and arrested 27 accused in the recently concluded Indian Premier League match.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm