ಬ್ರೇಕಿಂಗ್ ನ್ಯೂಸ್
21-10-21 12:34 pm Mangalore Reporter ಕ್ರೈಂ
ಮಂಗಳೂರು, ಅ.21 : ವಾರಂಟ್ ಪ್ರಕರಣದಲ್ಲಿ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ನಟೋರಿಯಸ್ ರೌಡಿಯೊಬ್ಬ ತಲವಾರು ಬೀಸಿ ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದ್ದು ಬಳಿಕ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ. ಆತನಿಗೆ ಪರಾರಿಯಾಗಲು ಸಹಕರಿಸಿದ ಆರೋಪಿಯನ್ನು ಅಡ್ಡಗಟ್ಟಿ ಪೊಲೀಸರು ಬಂಧಿಸಿದ್ದಾರೆ.
ಮುಕ್ಕಚ್ಚೇರಿ ಬಳಿಯ ಧರ್ಮನಗರ ನಿವಾಸಿ ನಟೋರಿಯಸ್ ಕ್ರಿಮಿನಲ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು ತೆರಳಿದ್ದರು. ಧರ್ಮನಗರದ ಮನೆಗೆ ತೆರಳಿದ್ದಾಗ ತಲವಾರು ಹಿಡಿದೇ ಹೊರಬಂದ ಮುಕ್ತಾರ್, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲಿಂದ ತಲವಾರು ತೋರಿಸುತ್ತಲೇ ಹತ್ತಿರದ ನವಾಝ್ ಎಂಬವನ ಬೈಕಿನಲ್ಲಿ ಪರಾರಿಯಾಗಿದ್ದಾನೆ.
ಪೊಲೀಸರು ಬೆನ್ನಟ್ಟಿದ್ದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಬೈಕನ್ನು ಹಿಡಿದಿದ್ದಾರೆ. ಆದರೆ, ಇದರ ನಡುವಲ್ಲೇ ಮುಕ್ತಾರ್ ಅಹ್ಮದ್ ಬೈಕಿನಿಂದ ಇಳಿದು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಬೈಕಿನಲ್ಲಿದ್ದ ನವಾಝ್ ನನ್ನು ಪೊಲೀಸರು ಹಿಂಬಾಲಿಸಿ ಬಂದಿದ್ದನ್ನು ತಿಳಿದು ಎಸ್ಕೇಪ್ ಆಗುವ ಯತ್ನದಲ್ಲಿ ಮುಂದಿನಿಂದ ಬಂದ ವ್ಯಾಗನರ್ ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ, ಸಿನಿಮಾ ಮಾದರಿಯಲ್ಲಿ ನವಾಝ್ ನನ್ನು ಬಂಧಿಸಿದ್ದಾರೆ. ಈತ ಈ ಹಿಂದೆ ಟಾರ್ಗೆಟ್ ಗ್ಯಾಂಗ್ ಲೀಡರ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ದಾವೂದ್ ಎಂಬಾತನ ತಮ್ಮನಾಗಿದ್ದು ಆತನ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುಕ್ತಾರ್ ವಿರುದ್ಧ ಉಳ್ಳಾಲ ಠಾಣೆ ಒಂದರಲ್ಲೇ ಏಳು ಪ್ರಕರಣಗಳಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Ullal Notorious criminal tries to attack Police staffs with Talwar when they went to arrest him at his residence after Warrant was issued against him. The police somehow managed to arrest him at Thokottu. The arrested has Ben identified as Mukthar a resident of Mukacheri.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm