ಬ್ರೇಕಿಂಗ್ ನ್ಯೂಸ್
22-10-21 08:51 pm Mangaluru Correspondent ಕ್ರೈಂ
ಮಂಗಳೂರು, ಅ.22 : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ಅವರನ್ನು ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ (ಕೆಎಸ್‌ಬಿಸಿ) ಸದಸ್ಯತ್ವದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮಂಗಳೂರಿನ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ರಾಜೇಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದೆ. ಹೀಗಾಗಿ ಗಂಭೀರ ಆರೋಪ ಎದುರಿಸುತ್ತಿರುವ ನ್ಯಾಯವಾದಿಯನ್ನು ಬಾರ್ ಕೌನ್ಸಿಲ್ ಅಧ್ಯಕ್ಷ ಶ್ರೀನಿವಾಸ ಬಾಬು ನೇತೃತ್ವದ ಸಮಿತಿ ಅಮಾನತುಗೊಳಿಸಿದೆ. ರಾಜೇಶ್ ವಿರುದ್ಧ ಆರೋಪದ ಎಫ್‌ಐಆರ್ ಹಾಗೂ ದೂರುಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಗರದ ಕರಂಗಲ್ಪಾಡಿಯಲ್ಲಿ ಕಚೇರಿಯನ್ನು ಹೊಂದಿರುವ ಕೆಎಸ್ಎನ್ ರಾಜೇಶ್ ಅವರು 2001ರಲ್ಲಿ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿದ್ದರು. ರಾಜೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನ್ಯಾಯವಾದಿಗಳ ಕಾಯ್ದೆಯ 35ನೇ ಸೆಕ್ಷನ್ ಅಡಿ ಮುಂದಿನ ಆದೇಶದ ವರೆಗೆ ಈ ಅಮಾನತು ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬಾರ್ ಕೌನ್ಸಿಲ್‌ನಿಂದ ರಾಜೇಶ್ ಅಮಾನತುಗೊಂಡಿದ್ದರಿಂದ ಪೊಲೀಸ್ ತನಿಖೆ ಪೂರ್ತಿಗೊಳ್ಳುವ ವರೆಗೆ ಮತ್ತು ಬಾರ್ ಕೌನ್ಸಿಲ್ ಈ ಬಗ್ಗೆ ಮುಂದಿನ ಆದೇಶ ನೀಡುವ ವರೆಗೆ ನ್ಯಾಯಾಲಯದಲ್ಲಿ ವಕಾಲತು ವಹಿಸುವ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ.
ನಿರೀಕ್ಷಣಾ ಜಾಮೀನಿಗೆ ಅರ್ಜಿ
ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ರಾಜೇಶ್ ಪರವಾಗಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳೂರಿನ ಖ್ಯಾತ ಕ್ರಿಮಿನಲ್ ವಕೀಲರೊಬ್ಬರು ಮಂಗಳೂರಿನ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಈ ಅರ್ಜಿ 6ನೇ ಜೆಎಂಎಫ್ ಕೋರ್ಟಿನಲ್ಲಿ ವಿಚಾರಣೆಗೆ ಬರಲಿದೆ ಎನ್ನಲಾಗುತ್ತಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
Mangalore Sexual Assult on staffs by Lawyer KSN Rajesh case suspended by Bar Counil also the advocate won't be permitted of submitting Vakalath in the court. A law student from Mangaluru had filed a complaint against special public prosecutor of Lokayukta Court that he attempted to rape her. In a complaint to women's police station at Pandeshwar, the student filed a complaint against KSN Rajesh and stated that in August, she had joined as an intern under him at Karangalpady. In the meantime, Rajesh allegedly used to force her for sex.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm