ಬ್ರೇಕಿಂಗ್ ನ್ಯೂಸ್
27-10-21 04:37 pm Mangalore Reporter ಕ್ರೈಂ
ಉಡುಪಿ, ಅ.27 : ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವೆಂಕಟೇಶ(30) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಘಟನೆ ನಡೆದಿತ್ತು. ವೆಂಕಟೇಶ್ ತನ್ನ ಮನೆಗೆ ಆಟ ಆಡಲೆಂದು ಬಂದಿದ್ದ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಮಗು ಮನೆಯಲ್ಲಿ ಅಸ್ವಸ್ಥಳಾಗಿದ್ದರಿಂದ ತಾಯಿ ಕಷಾಯ ಮಾಡಿ ಕೊಟ್ಟಿದ್ದರು. ಆದರೆ ಬಾಲಕಿ ವಿಪರೀತ ಅನಾರೋಗ್ಯಕ್ಕೀಡಾಗಿದ್ದು ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಮಗು ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ಕಾರ್ಕಳ ಠಾಣೆಗೆ ದೂರು ನೀಡಲಾಗಿತ್ತು. ಅಂದಿನ ಉಪನಿರೀಕ್ಷಕ ನಂಜಾ ನಾಯ್ಕ್ ಪ್ರಕರಣ ದಾಖಲಿಸಿದ್ದರು. ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಒಟ್ಟು19 ಮಂದಿ ಸಾಕ್ಷಿಗಳ ಪೈಕಿ 12 ಮಂದಿಯನ್ನು ವಿಚಾರಣೆಗೆ ಗುರಿಪಡಿಸಿತ್ತು. ವೈದ್ಯಕೀಯ ದಾಖಲೆಗಳು, ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷ್ಯಾಧಾರಗಳು ಅಭಿಯೋಜನೆ ಪರವಾಗಿತ್ತು. ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಸಜೆ, 20 ಸಾವಿರ ದಂಡ ಮತ್ತು ಸಂತ್ರಸ್ತೆಗೆ 75 ಸಾವಿರ ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
Judge of the district additional and sessions court which also is the fast track court for cases under the Protection of Children from Sexual Offences (POCSO) Act, sentenced an accused to ten years jail term. Judge of the court, Yermal Kalpana, who found that the charge of sexual atrocity committed by the accused on a five-year-old girl who had been to neighbouring house to play, has been proved, awarded the above sentence.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm