ಬ್ರೇಕಿಂಗ್ ನ್ಯೂಸ್
27-10-21 08:32 pm Mangaluru Correspondent ಕ್ರೈಂ
ಪುತ್ತೂರು, ಅ.27 : ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಆಕೆ ಮಗುವಿಗೆ ಜನ್ಮ ನೀಡಲು ಕಾರಣ ಎಂಬ ಆರೋಪಕ್ಕೀಡಾಗಿರುವ ಬಿಜೆಪಿ ಮುಖಂಡ, 70 ವರ್ಷದ ಕುದ್ಕಾಡಿ ನಾರಾಯಣ ರೈ ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ.
17ರ ಹರೆಯದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿ ನಿರಂತರ ಅತ್ಯಾಚಾರಕ್ಕೀಡಾಗಿ ಕಳೆದ ಸೆಪ್ಟೆಂಬರ್ 5 ರಂದು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ತನ್ನನ್ನು ದುರುಪಯೋಗ ಪಡಿಸಿದ ನಾರಾಯಣ ರೈ ವಿರುದ್ಧ ಆರೋಪಿಸಿ ದೂರು ನೀಡಿದ್ದಳು. ಆದರೆ, ಪೊಲೀಸರು ಸಂತ್ರಸ್ತೆಯ ಸಹೋದರನನ್ನೆ ಈ ಪ್ರಕರಣದ ಆರೋಪಿ ಎಂದು ಬಂಧಿಸಿದ್ದರು. ಆದರೆ ಆ ಬಳಿಕ ಬಾಲಕಿ ಮತ್ತು ದಲಿತ ಸಂಘಟನೆಯವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ನಾರಾಯಣ ರೈ ಕಾರಣ ಎಂದು ಆರೋಪಿಸಿದ್ದರು. ಅಲ್ಲದೆ, ಡಿಎನ್ಎ ಟೆಸ್ಟ್ ಮಾಡುವಂತೆ ಸವಾಲು ಹಾಕಿದ್ದರು.

ಈ ನಡುವೆ, ಆರೋಪಿ ನಾರಾಯಣ ರೈ ಬಂಧನದ ಭೀತಿಯಿಂದ ತಲೆಮರೆಸಿಕೊಂಡು, ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ಅರ್ಜಿ ಕೋರ್ಟ್ ವಜಾ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಸಂಘಟನೆಗಳು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆಯ ವಿರುದ್ದ ಪ್ರತಿಭಟನೆ ಎಚ್ಚರಿಕೆ ನೀಡಿದ್ದರು.
ಆನಂತರದ ಬೆಳವಣಿಗೆಯಲ್ಲಿ ನಾರಾಯಣ ರೈ ಇಂದು ದಿಢೀರ್ ಆಗಿ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ನಾರಾಯಣ ರೈಯನ್ನು ಎರಡು ದಿನ ಪೋಲೀಸ್ ಕಸ್ಟಡಿಗೆ ನೀಡಿದ್ದಾರೆ.
ದಲಿತ ಬಾಲಕಿ ಮೇಲೆ ಅತ್ಯಾಚಾರ ; ಆರೆಸ್ಸೆಸ್ ಮುಖಂಡನ ವಿರುದ್ಧ ಆರೋಪ, ಬಂಧನಕ್ಕೆ ಆಗ್ರಹ
Puttur Rss Leader Narayana Rai who raped a minor girl belonging to the Dalit community who used to work on his farm in Badagannur village, Puttur taluk has surrendered himself to the court. The organization demanded for the immediate arrest of Rai, in-depth investigation by considering this as a special case, initiation of legal action against the Puttur rural police personnel, conducting DNA tests of the accused and the aggrieved girl. The leaders also warned that if there is delay in meeting these demands, the organization will arrange for holding a protest in front of Puttur rural police station at Sampya.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm