ಬ್ರೇಕಿಂಗ್ ನ್ಯೂಸ್
04-11-21 09:42 am Mangaluru Correspondent ಕ್ರೈಂ
ಮಂಗಳೂರು, ನ.4: ಕ್ಷುಲ್ಲಕ ವಿಚಾರದಲ್ಲಿ ಜಗಳ ನಡೆದು ತಂದೆ, ಮಗ ಸೇರಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಥಬೀದಿಯ ಮಹಮ್ಮಾಯಿ ದೇವಸ್ಥಾನದ ಬಳಿಯ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿವಾಸಿ, ವಿಕ್ರಮ್ ಟ್ರಾವೆಲ್ಸ್ ಕಂಪನಿಯ ಟೂರ್ ಮ್ಯಾನೇಜರ್ ಆಗಿದ್ದ ವಿನಾಯಕ ಕಾಮತ್ (46) ಕೊಲೆಯಾದವರು.
ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ಕೃಷ್ಣಾನಂದ ಕಿಣಿ (68) ಮತ್ತು ಅವರ ಮಗ ಅವಿನಾಶ್ (32) ಸೇರಿಕೊಂಡು ನಿನ್ನೆ ರಾತ್ರಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಾರೆ. 4-5 ದಿನಗಳ ಹಿಂದೆ, ಅಪಾರ್ಟ್ಮೆಂಟ್ ಮುಂದುಗಡೆ ಮಹಾನಗರ ಪಾಲಿಕೆ ವತಿಯಿಂದ ಕಾಂಕ್ರೀಟ್ ಹಾಕಲಾಗಿತ್ತು. ಅದರ ಮೇಲಿಂದ ಕಾರು ಒಯ್ಯುವ ವಿಚಾರದಲ್ಲಿ ಜಗಳ ನಡೆದಿದ್ದು ಇವರೊಳಗೆ ಮಾತಿಗೆ ಮಾತಾಗಿ ಜಗಳ ಆಗಿತ್ತು. ಈ ಹಿಂದೆಯೂ ಕೃಷ್ಣಾನಂದ ಕಿಣಿ ಹಳೆ ದ್ವೇಷ ಇಟ್ಟುಕೊಂಡಿದ್ದು ವಿನಾಯಕ ಕಾಮತ್ ವಿರುದ್ಧ ಜಗಳವಾಡುತ್ತಿದ್ದರು.

ನಿನ್ನೆ ರಾತ್ರಿ ಅಪಾರ್ಟ್ಮೆಂಟ್ ನಿವಾಸಿಗಳು ಕೆಳಗಡೆ ದೀಪಾವಳಿ ಪ್ರಯುಕ್ತ ಪಟಾಕಿ ಸಿಡಿಸುತ್ತಿದ್ದು ವಿನಾಯಕ ಕಾಮತ್ ಕೂಡ ಅಲ್ಲಿಗೆ ತೆರಳಿದ್ದರು. ಈ ವೇಳೆ, ಇಬ್ಬರ ಮಧ್ಯೆ ಮತ್ತೆ ಜಗಳ ತೆಗೆದಿದ್ದು ಮಾತಿಗೆ ಮಾತಾಗಿತ್ತು. ಇತರೇ ನಿವಾಸಿಗಳು ನೋಡುತ್ತಿದ್ದಂತೆಯೇ ವಿನಾಯಕ ಕಾಮತ್ ಮೇಲೆ, ಕೃಷ್ಣಾನಂದ ಕಿಣಿ ಮತ್ತು ಅವರ ಮಗ ಅವಿನಾಶ್ ಕಾಮತ್ ಚೂರಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ವಿನಾಯಕ ಕಾಮತ್ ಮತ್ತು ಪತ್ನಿ ಬಂದು ನೋಡಿದ್ದು ಕುಸಿದು ಬಿದ್ದ ವಿನಾಯಕ ಅವರನ್ನು ಕೂಡಲೇ ಇತರ ನಿವಾಸಿಗಳ ಸಹಾಯ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದರು. ರಾತ್ರಿ ಸುಮಾರು 1.40 ಕ್ಕೆ ವಿನಾಯಕ ಕಾಮತ್ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾರೆ.
ಈ ಬಗ್ಗೆ ವಿನಾಯಕ ಕಾಮತ್ ಪತ್ನಿ ಬಂದರು ಠಾಣೆಯಲ್ಲಿ ದೂರು ನೀಡಿದ್ದು ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ತಂದೆ - ಮಗನನ್ನು ಪೊಲೀಸರು ಬಂಧಿಸಿದ್ದಾರೆ.
Amani Kamath (35), resident of Veera Venkatesh Apartment on Mahamayi temple road, in the city, has alleged that her husband Vinayak Kamath, was murdered by Krishnananda Kini and his son Avinash Kini, residing in the same complex. Amani stated in her complaint made to the city (north) police station that she has been a resident of flat No 108 of the said complex for the last five years. Her husband, son and mother-in-law are the other residents of this flat. She does tailoring jobs and her husband was a tour manager of Vikram Travels here.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm