ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್‌ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್‌ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್‌ಮೆಂಟ್‌ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm