ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್‌ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್‌ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
25-08-25 10:37 am
HK News Desk
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm