ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm