ಬ್ರೇಕಿಂಗ್ ನ್ಯೂಸ್
30-01-22 05:25 pm HK Desk news ಕ್ರೈಂ
ಭಿಲ್ವಾರ, ಜ 30 : ರಾಜಸ್ಥಾನದ ಬಿಜೆಪಿ ಮುಖಂಡ ಭನ್ವರ್ ಸಿಂಗ್ ಪಾಲ್ಡಾ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಭನ್ವರ್ ಸಿಂಗ್ ರಿವಾಲ್ವರ್ ತೋರಿಸಿ ಬೆದರಿಸಿ ತಮ್ಮ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಭಿಲ್ವಾರಾ ಜಿಲ್ಲೆಯ ಮಹಿಳಾ ಸಬ್ ಇನ್ಸ್‌ಪೆಕ್ಟರ್, ಅಜ್ಮೀರ್‌ನ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಖಂಡ ದೌರ್ಜನ್ಯ ಎಸಗಿದ್ದಲ್ಲದೆ, ತನ್ನ ಅಶ್ಲೀಲ ಫೋಟೋಗಳನ್ನು ತೆಗೆದಿದ್ದು, ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಸಬ್ ಇನ್ಸ್‌ಪೆಕ್ಟರ್ ದೂರಿದ್ದಾರೆ. ಈ ಸಂಬಂಧ ಪಾಲ್ಡಾ ಹಾಗೂ ಅವರ ಕಾರು ಚಾಲಕ ಸೇರಿದಂತೆ 11 ಜನರ ವಿರುದ್ಧ ದೂರು ದಾಖಲಾಗಿದೆ.
2018ರಲ್ಲಿ ಒಮ್ಮೆ ತಮ್ಮ ಕಾರು ಕೆಟ್ಟುಹೋಗಿದ್ದ ಕಾರಣ ಕೆಲಕಾಲ ತಮ್ಮ ಕ್ವಾರ್ಟರ್ಸ್ಗೆ ಭನ್ವರ್ ಸಿಂಗ್ ಬಂದಿದ್ದ. ಕೆಲಕಾಲ ಇದ್ದು ತೆರಳುವುದಾಗಿ ತಿಳಿಸಿದ್ದ ಭನ್ವರ್, ಬಳಿಕ ತಾವು ಅಡುಗೆ ಕೋಣೆಯಲ್ಲಿದ್ದಾಗ ಹಿಂದಿನಿಂದ ಬಂದು ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಇನ್ನೊಮ್ಮೆ ಅಜ್ಮೀರ್‌ನಿಂದ ಭಿಲ್ವಾರಕ್ಕೆ ತೆರಳುತ್ತಿದ್ದಾಗ ಪೊಲೀಸ್ ಲೈನ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಭೇಟಿ ಮಾಡಿದ್ದ ಆರೋಪಿಯು ರಿವಾಲ್ವರ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಅಶ್ಲೀಲ ಫೋಟೋ ತೆಗೆದುಕೊಂಡಿದ್ದು, ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 450, 376 ಡಿ, 3762 ಎನ್, 354, 506, 365, 323 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿದೆ.
A woman sub-inspector in Bhilwara district has accused a former BJP leader and others of gangraping her, prompting the police to register an FIR on her complaint. The woman SI lodged her complaint on Saturday following which an FIR was registered against main accused Bhanwar Singh Palara and some other people including his staffers under various sections, including 376-D of the Indian Penal Code, Bhilwara SP Adarsh Sidhu said.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm