ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.
ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am