ಬ್ರೇಕಿಂಗ್ ನ್ಯೂಸ್
24-03-22 11:45 am Mangalore Correspondent ಕ್ರೈಂ
ಉಳ್ಳಾಲ, ಮಾ.24 : ವಾಚ್ ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪಿಎಸ್ ಐ ಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಪಿಎಸ್ ಐ ಶರಣಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೂರಿ ಇರಿದ ಮಹಮ್ಮದ್ ಸಾದಿಕ್ ಪರಾರಿಯಾಗಿದ್ದು ಆತನಿಗೆ ಸಹಕರಿಸಿದ ನಝೀರ್ ಎಂಬವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಲೆಬಾಳುವ ವಾಚ್ ಕಳ್ಳತನದ ಆರೋಪಿ ಮಹಮ್ಮದ್ ಸಾದಿಕ್ ಪಾವೂರಿನಲ್ಲಿ ತನ್ನ ಅತ್ತೆ ಮನೆಯಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದರು. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ಬೆಲೆಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ಬಂದರು ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಕಾಸರಗೋಡು ಕಡೆಯಿಂದ ಕದ್ದು ತಂದಿದ್ದ ಬೆಲೆಬಾಳುವ ವಾಚನ್ನು ಅಂಗಡಿಯೊಂದಕ್ಕೆ ಮಾರಾಟ ಮಾಡಲು ಬಂದಿದ್ದ ಬಗ್ಗೆ ಮಾಹಿತಿಯನ್ನು ಅಂಗಡಿ ಮಾಲಿಕರೇ ಪೊಲೀಸರಿಗೆ ತಿಳಿಸಿದ್ದರು. ನಗರದ ಬಂದರು ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದಾಗ ಪೊಲೀಸ್ ಸಿಬಂದಿ ವಿನೋದ್ ಮತ್ತು ಪ್ರವೀಣ್ ಎಂಬವರಿಗೆ ಚೂರಿಯಿಂದ ಹಲ್ಲೆಗೈದು ಪರಾರಿಯಾಗಿದ್ದ. ಸಿಬಂದಿ ವಿನೋದ್ ಅವರಿಗೆ ಚೂರಿಯಿಂದ ಇರಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ.
ಇದೀಗ ಆರೋಪಿ ಹರೇಕಳದ ಪಾವೂರಿನ ಮನೆಯೊಂದರಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿ ಬುಧವಾರ ರಾತ್ರಿ ದಾಳಿ ಮಾಡಿದ್ದು ಆರೋಪಿ ಸಾದಿಕ್ ಪಿಎಸ್ ಐ ಶರಣಪ್ಪ ಅವರ ತೋಳಿಗೆ ಚೂರಿಯಿಂದ ಗಾಯಗೊಳಿಸಿ ಪರಾರಿಯಾಗಿದ್ದಾನೆ.
ಚೂರಿ ಇರಿದ ಆರೋಪಿ ಮಹಮ್ಮದ್ ಸಾದಿಕ್ ಪರಾರಿಯಾಗಿದ್ದು ಆತನ ಜೊತೆಗಿದ್ದ ನಝೀರ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಲ್ಲೆಯಿಂದ ಗಾಯಗೊಂಡಿರುವ ಶರಣಪ್ಪ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
In an incident which happened during the late night hours of Wednesday March 23 within the limits of Konaje police station, a theft-accused stabbed and injured a policeman. The incident happened when a police team went to take the accused into custody for questioning. In this attack, Konaje police sub-inspector (PSI) Sharanappa, was injured. He has been admitted into a hospital.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm