ಬ್ರೇಕಿಂಗ್ ನ್ಯೂಸ್
31-03-22 03:03 pm HK Desk news ಕ್ರೈಂ
ಜೈಪುರ, ಮಾ.31: ಗರ್ಭಿಣಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಆರೋಪದಲ್ಲಿ ಪೊಲೀಸರು ತನ್ನ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರಿಂದ ಮನನೊಂದ ಮಹಿಳಾ ವೈದ್ಯೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.
ನನ್ನ ಸಾವು ನಿರಪರಾಧಿತ್ವವನ್ನು ಸಾಬೀತು ಪಡಿಸಲಿದೆ. ಯಾವುದೇ ನಿರಪರಾಧಿ ವೈದ್ಯರಿಗೆ ಕಿರುಕುಳ ಕೊಡಬೇಡಿ ಎಂದು ಡೆತ್ ನೋಟ್ ಬರೆದಿಟ್ಟು ಡಾ.ಅರ್ಚನಾ ಶರ್ಮಾ ಎಂಬ ಮಹಿಳಾ ವೈದ್ಯೆ ಸಾವಿಗೆ ಶರಣಾಗಿದ್ದಾರೆ. ವೈದ್ಯೆಯ ಸಾವು ರಾಜಸ್ಥಾನದಲ್ಲಿ ಭಾರೀ ಸಂಚಲನ ಎಬ್ಬಿಸಿದ್ದು, ರಾಜಕೀಯ ಒತ್ತಡದಿಂದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಬಿಜೆಪಿ ನಾಯಕರೊಬ್ಬರ ವಿರುದ್ಧವೂ ಆರೋಪ ಕೇಳಿಬಂದಿದೆ.
ನಾನು ಪತಿ ಮತ್ತು ಮಕ್ಕಳನ್ನು ತುಂಬ ಪ್ರೀತಿಸುತ್ತೇನೆ. ಘಟನೆ ನೆಪದಲ್ಲಿ ಪತಿ, ಮಕ್ಕಳಿಗೆ ಕಿರುಕುಳ ಕೊಡಬೇಡಿ. ನನ್ನ ಸಾವಿನೊಂದಿಗೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ನಿರೂಪಿಸಿದ್ದೇನೆ. ನಾನು ಯಾರನ್ನೂ ಕೊಂದಿಲ್ಲ. ಪಿಪಿಎಚ್ ಎನ್ನುವುದು ಗರ್ಭಿಣಿಯರಲ್ಲಿ ಕಂಡುಬರುವ ಸಾಮಾನ್ಯ ಕಾಯಿಲೆ. ಇದಕ್ಕಾಗಿ ವೈದ್ಯರನ್ನು ದೂಷಿಸುವುದನ್ನು ನಿಲ್ಲಿಸಿ. ನಿರಪರಾಧಿ ವೈದ್ಯರಿಗೆ ಕಿರುಕುಳ ಕೊಡುವುದನ್ನು ನಿಲ್ಲಿಸಿ. ನನ್ನ ಮಕ್ಕಳು ತಾಯಿ ಪ್ರೀತಿಯಿಂದ ವಂಚಿತವಾಗುವುದನ್ನು ತಪ್ಪಿಸಿ ಎಂದು ಡೆತ್ ನೋಟ್ ನಲ್ಲಿ ವೈದ್ಯರು ಬರೆದಿಟ್ಟಿದ್ದಾರೆ.
ಗರ್ಭಿಣಿ ಮಹಿಳೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದರು. ಬಳಿಕ ಆಸ್ಪತ್ರೆ ಮುಂಭಾಗದಲ್ಲಿ ಬಿಜೆಪಿ ನಾಯಕ, ಮಾಜಿ ಶಾಸಕ ಜಿತೇಂದ್ರ ಗೋತ್ವಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಆನಂತರ ಲಾಲ್ ಸಟ್ ಪೊಲೀಸರು ಆಸ್ಪತ್ರೆ ಮತ್ತು ವೈದ್ಯರ ವಿರುದ್ಧ 320 ಸೆಕ್ಷನ್ ಆಧರಿಸಿ ಕೊಲೆ ಪ್ರಕರಣ ದಾಖಲು ಮಾಡಿದ್ದರು. ಇದರಿಂದ ನೊಂದ ಮಹಿಳಾ ವೈದ್ಯೆ ಅರ್ಚನಾ ಶರ್ಮಾ ಸಾವಿಗೆ ಶರಣಾಗಿದ್ದು ಈಗ ರಾಜಸ್ಥಾನದಲ್ಲಿ ಭಾರೀ ಸಂಚಲನ ಎಬ್ಬಿಸಿದೆ.
ಘಟನೆ ಹಿನ್ನೆಲೆಯಲ್ಲಿ ಲಾಲ್ಸಟ್ ಪೊಲೀಸ್ ಠಾಣಾಧಿಕಾರಿ ಅಂಕಿತ್ ಚೌಧರಿಯನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಇಲಾಖಾ ತನಿಖೆಯ ನೆಪದಲ್ಲಿ ಗೌಸಾ ಜಿಲ್ಲೆಯ ಎಸ್ಪಿಯನ್ನು ಎತ್ತಂಗಡಿ ಮಾಡಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆಗೆ ರಾಜಸ್ಥಾನ ಸರಕಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮಾಜಿ ಶಾಸಕ, ಬಿಜೆಪಿ ನಾಯಕ ಜಿತೇಂದರ್ ಗೋತ್ವಾಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
"My death may prove my innocence. DON'T HARASS INNOCENT DOCTORS. Please," Dr Archana Sharma, who died by suicide in Rajasthan's Dausa district earlier this week, had said in a suicide note.Dr Archana Sharma was a medical practitioner working with a private hospital in Rajasthan's Dausa. An FIR was filed against her under section 302 (murder) of the Indian Penal Code in connection with the death of a pregnant woman at her hospital.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:18 pm
Mangalore Correspondent
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm