ಬ್ರೇಕಿಂಗ್ ನ್ಯೂಸ್
04-04-22 08:02 pm HK Desk news ಕ್ರೈಂ
ಬೆಳಗಾವಿ, ಎ.4 : ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ಎಂಟು ಮಂದಿ ಅಪರಾಧಿಗಳಿಗೆ ಕೋಕಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಮೂರು ಕೋಟಿ ರೂಪಾಯಿ ಹಫ್ತಾ ನೀಡದಿದ್ದಕ್ಕೆ ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ್ ಅವರನ್ನು 2013, ಡಿಸೆಂಬರ್ 21 ರಂದು ಹತ್ಯೆ ಮಾಡಲಾಗಿತ್ತು. ಸುಪಾರಿ ನೀಡಿ ತನ್ನ ಸಹಚರರ ಮೂಲಕ ಬನ್ನಂಜೆ ರಾಜಾ ಹತ್ಯೆ ಮಾಡಿಸಿದ ಪ್ರಕರಣ ಇತ್ತೀಚೆಗೆ ಕೋರ್ಟಿನಲ್ಲಿ ಸಾಬೀತಾಗಿತ್ತು.
ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಆರೋಪಿಗಳು ಸಂಘಟಿತ ನೆಲೆಯಲ್ಲಿ ಅಪರಾಧ ಎಸಗಿದ್ದರಿಂದ ಅವರ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಕೋಕಾ ಕಾಯ್ದೆಯಡಿ ಮೊದಲ ಬಾರಿಗೆ ಅಪರಾಧ ಸಾಬೀತಾಗಿದ್ದು ಶಿಕ್ಷೆ ವಿಧಿಸಲಾಗುತ್ತಿದೆ. ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವ ವಕಾಲತ್ತು ವಹಿಸಿದ್ದರು. ಬನ್ನಂಜೆ ರಾಜಾ ಪರ ಉಡುಪಿ ಮೂಲದ ವಕೀಲ ಎಂ.ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು.
ಮಾ.28 ರಂದು ವಿಚಾರಣೆ ಪೂರ್ತಿಗೊಳಿಸಿ ನಾಲ್ವರನ್ನು ಖುಲಾಸೆಗೊಳಿಸಿದ್ದ ಕೋರ್ಟ್ ಎಂಟು ಮಂದಿ ತಪ್ಪಿತಸ್ಥರು ಎಂದು ಘೋಷಣೆ ಮಾಡಿತ್ತು. ಶಿಕ್ಷೆ ಪ್ರಮಾಣವನ್ನು ನ್ಯಾಯಾಧೀಶ ಎಂ.ಎಂ. ಜೋಷಿ ಇಂದು ಪ್ರಕಟಿಸಿದ್ದಾರೆ.
The Coca Court here has sentenced four convicts involved in the murder of underworld gangster Bannanje Raja in the murder of businessman RN Nayaka of Belgaum.Last Ma. Judge CM Joshi announced the verdict of the 5 accused in the case and sentenced them to life imprisonment today.RN Nayak was executed by Supari for not paying Rs. This allegation was proven in court. Udupi-based Bannanje Raja, the second accused in the case, has been sentenced to life imprisonment.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm