ಬ್ರೇಕಿಂಗ್ ನ್ಯೂಸ್
09-04-22 10:12 pm Bengaluru Correspondent ಕ್ರೈಂ
ಬೆಂಗಳೂರು, ಎ.9 : 16 ವರ್ಷದ ಅಪ್ರಾಪ್ತ ಹುಡುಗಿ ಮೇಲೆ ಎಂಟು ಜನ ಕಾಮುಕರು ಸೇರಿ ಹಲವು ತಿಂಗಳ ಕಾಲ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ಮೊದಲು ಪ್ರಮುಖ ಆರೋಪಿಯೊಬ್ಬ ಹುಡುಗಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದು ಅದನ್ನು ವಿಡಿಯೋ ರೆಕಾರ್ಡ್ ಮಾಡಿದ್ದ. ಆನಂತರ ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಲ್ಲದೆ, ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಆರಂಭಿಸಿದ್ದ. ನಂತರ ಅದೇ ವಿಡಿಯೋ ಮುಂದಿಟ್ಟು ತನ್ನ ಸ್ನೇಹಿತರ ಜೊತೆಗೂ ಸಹಕರಿಸುವಂತೆ ಬೆದರಿಕೆ ಒಡ್ಡಿದ್ದಾನೆ. ಇಲ್ಲದಿದ್ದರೆ ವಿಡಿಯೋವನ್ನು ಹೊರಗೆ ಹರಿಯ ಬಿಡುವುದಾಗಿ ಬ್ಲಾಕ್ಮೇಲ್ ಮಾಡಿದ್ದಾನೆ.
ಆಬಳಿಕ ಸರದಿಯಂತೆ ಎಂಟು ಮಂದಿ ಸ್ನೇಹಿತರು ಸೇರಿ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಮೊದಲು ಇಬ್ಬರು ಆರೋಪಿಗಳಿಂದ ಶುರುವಾದ ಕಾಮುಕ ಕೃತ್ಯ ಆಮೇಲೆ ಒಬ್ಬರಾದ ಮೇಲೆ ಒಬ್ಬರಂತೆ ಕಾಮ ತೃಷೆ ತೀರಿಸಿಕೊಳ್ಳುವ ಮಟ್ಟಕ್ಕೆ ಬಂದಿತ್ತು. ಇತ್ತೀಚೆಗೆ ಮಗಳು ಮನೆಗೆ ಬಂದಾಗ ಅಳುತ್ತಿದ್ದುದನ್ನು ಕಂಡು ಹೆತ್ತವರು ಪ್ರಶ್ನೆ ಮಾಡಿದ್ದಾರೆ.
ಆದರೆ ಸ್ನೇಹಿತರ ವಿಡಿಯೋ ಬೆದರಿಕೆಗೆ ಹೆದರಿ ಮನೆಯವರಲ್ಲಿ ನಿಜ ವಿಚಾರ ಹೇಳಿರಲಿಲ್ಲ. ಮನೆಯಲ್ಲಿ ಅಂದು ಕಬಾಬ್ ಇದ್ದುದರಿಂದ ಅದನ್ನು ತಿಂದು, ಕಬಾಬ್ ಖಾರ ಇತ್ತು , ಅದ್ಕೆ ಕಣ್ಣೀರು ಬಂತು ಎಂದು ಹೇಳಿ ತಪ್ಪಿಸಿಕೊಂಡಿದ್ದಳು. ಬಳಿಕ ಮನೆಮಂದಿ ವಿಚಾರ ಕೆದಕಿದಾಗ ಕೃತ್ಯದ ಬಗ್ಗೆ ತಿಳಿಸಿದ್ದು ಹೆತ್ತವರು ಗಾಬರಿಗೊಂಡಿದ್ದಾರೆ. ತಕ್ಷಣ ಎಂಟು ಜನ ಕಾಮುಕರ ವಿರುದ್ಧ ಪೋಷಕರು ದೂರು ನೀಡಿದ್ದು ಅದರಂತೆ ಏಳು ಜನರನ್ನ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಯಲಹಂಕ ಠಾಣೆಯಲ್ಲಿ ಪೋಕ್ಸೋ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Karnataka police have arrested seven persons in connection with the gang rape of a 16-year-old girl in Bengaluru, officials said on Saturday, adding that search is underway for another accused.According to the police, the main accused person had sexually assaulted the victim and made a video of the incident.After the assault he had threatened the victim that he would kill her if she chose to tell anyone about it.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm